Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಗುತ್ತಿಗೆದಾರನ ಬಂಧನ

building-6ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಗೇಟ್ ಬಳಿ ಬುಧವಾರ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಗುತ್ತಿಗೆದಾರರನನ್ನು ಗುರುವಾರ ಬಂಧಿಸಲಾಗಿದೆ.
ಘಟನೆಯ ನಂತರ ನಾಪತ್ತೆಯಾಗಿದ್ದ ಗುತ್ತಿಗೆದಾರ ಶ್ರೀನಿವಾಸ್ ರೆಡ್ಡಿಯನ್ನು ಇಂದು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ನಿನ್ನೆ ಬೆಳ್ಳಂದೂರು ಗೇಟ್ ಮಾರತ್ತಹಳ್ಳಿ ರಿಂಗ್ ರಸ್ತೆ, ಇಕೋ ಸ್ಪೇಸ್ ಹತ್ತಿರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕು ಇಬ್ಬರು ಮೃತಪಟ್ಟಿದ್ದರು. ಅಲ್ಲದೆ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.
ಮಹಿಳೆಯರ ಪಿಜಿಗಾಗಿ ನಿರ್ಮಿಸಲಾಗುತ್ತಿದ್ದ ಈ ಕಟ್ಟಡ ಕುಸಿಯಲು ಕಳಪೆ ಕಾಮಗಾರಿಯೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಈ ಸಂಬಂಧ ಪೊಲೀಸರು ಗುತ್ತಿಗೆದಾರ ಹಾಗೂ ಕಟ್ಟಡ ನಿರ್ಮಾಣ ಯೋಜನೆಯಲ್ಲಿ ಭಾಗಿಯಾಗಿರುವ ಬಿಲ್ಡರ್ ಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಮೂರು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಐದು ಅಂತಸ್ತು ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ತಿಂಗಳುಗಳ ಹಿಂದೆ ನೋಟಿಸ್ ಜಾರಿಗೊಳಿಸಲಾಗಿತ್ತು. ಕಟ್ಟಡ ಅನಧಿಕೃತವಾದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು, ಬಿಬಿಎಂಪಿ ಅಧಿಕಾರಿಗಳು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದರೆ ಅವರ ಮೇಲೂ ಕ್ರಮ ಜರುಗಿಸುತ್ತೇವೆ ಎಂದು ಬಿಬಿಬಿಎಂಪಿ ಮೇಯರ್ ಜಿ.ಪದ್ಮಾವತಿ ಅವರು ನಿನ್ನೆ ತಿಳಿಸಿದ್ದರು.
No Comments

Leave A Comment