Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಶೋಪಿಯಾನ್ ನಲ್ಲೂ ಉಗ್ರರ ಅಟ್ಟಹಾಸ; ಸೇನಾ ವಾಹನದ ಮೇಲೆ ಗ್ರೆನೇಡ್ ದಾಳಿ, ಓರ್ವ ಸೈನಿಕ ಸೇರಿ 9 ಮಂದಿಗೆ ಗಾಯ

security-shopianಶ್ರೀನಗರ: ಅತ್ತ ಪ್ಯಾಂಪೋರ್ ಹೊರವಲಯದ ಸರ್ಕಾರಿ ಕಚೇರಿಯ ಮೇಲೆ ಉಗ್ರರ ದಾಳಿ ಮುಂದುವರೆದಿರುವಂತೆಯೇ ಇತ್ತ ಶೋಪಿಯಾನ್ ನಲ್ಲೂ ಉಗ್ರರು ಅಟ್ಟಹಾಸ ಮೆರೆದಿದ್ದು, ಸೇನಾ  ವಾಹನಗಳ ಮೇಲೆ ಗ್ರೆನೇಡ್  ಎಸೆದಿದ್ದು, ದಾಳಿಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರ ಬೆಳಗ್ಗೆ ಸಿಆರ್ ಪಿಎಫ್ ಯೋಧರನ್ನು ಗುರಿಯಾಗಿಸಿಕೊಂಡು ಈ ದಾಳಿ ಮಾಡಲಾಗಿದ್ದು, ಘಟನೆಯಲ್ಲಿ ಓರ್ವ ಯೋಧ ಸೇರಿದಂತೆ ಒಟ್ಟು 9 ಮಂದಿ ಗಾಯಗೊಂಡಿದ್ದಾರೆ. 

ಶೋಪಿಯಾನ್ ನ ಮಾರುಕಟ್ಟೆಯಲ್ಲಿ ನಿಯೋಜಿಸಲಾಗಿದ್ದ ಸಿಆರ್ ಪಿಎಫ್ ಯೋಧರ ಮೇಲೆ ಈ ದಾಳಿ ನಡೆದಿದ್ದು, ಅಗತ್ಯ ವಸ್ತುಗಳ ಖರೀದಿಗಾಗಿ ಮಾರುಕಟ್ಟೆಯಲ್ಲಿ ಹೆಚ್ಚು ನಾಗರಿಕರು ಸೇರಿದ್ದರ  ಪರಿಣಾಮ 8 ಮಂದಿ ನಾಗರಿಕರೂ ಕೂಡ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ದಾಳಿ ಬೆನ್ನಲ್ಲೇ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಪ್ರಸ್ತುತ ಘಟನಾ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕರೆಸಿಕೊಂಡು ಉಗ್ರರ ವಿರುದ್ಧ ಪ್ರತಿದಾಳಿ ನಡೆಸಲಾಗುತ್ತಿದೆ.

No Comments

Leave A Comment