Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ದಹನ ಜೆಎನ್‌ಯು ವಿದ್ಯಾರ್ಥಿ ಗುಂಪಿನ ದಸರಾ ಖಂಡಿಸಿ ಬಿಜೆಪಿ ಪ್ರತಿಭಟನೆ:ಪ್ರತಿಕೃತಿ ದಹನ

vdumcd3uಪಟ್ನ: ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಗುಂಪು ಪ್ರಧಾನಿ ನರೇಂದ್ರ ಮೋದಿ ಹಾಗೂ ನಾಥುರಾಮ್‌ ಗೋಡ್ಸ್‌ ಸೇರಿದಂತೆ ಹಲವರ ಮುಖಗಳನ್ನೊಳಗೊಂಡ ಪ್ರತಿಕೃತಿ ದಹಿಸಿ ದಸರಾ ಆಚರಿಸಿರುವುದನ್ನು ಖಂಡಿಸಿ, ಬಿಜೆಪಿ ಕಾರ್ಯಕರ್ತರು ಗುರುವಾರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ, ಅರವಿಂದ ಕೇಜ್ರಿವಾಲ್‌ ಸೇರಿದಂತೆ ಹಲವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಜೆಎನ್‌ಯು ಗುಂಪು ಪ್ರಧಾನಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಷಾ, ಮಹಾತ್ಮ ಗಾಂಧಿ ಅವರನ್ನು ಕೊಂದ ನಾಥುರಾಮ್‌ ಗೋಡ್ಸೆ ಸೇರಿದಂತೆ ಹಲವರ ಮುಖಗಳುಳ್ಳ ಪ್ರತಿಕೃತಿಯನ್ನು ದಹಿಸಿ ದಸರಾ ಆಚರಿಸಿದೆ. ರಾವಣನನ್ನು ಹೋಲುವ ಹತ್ತು ತಲೆಯ ಪ್ರತಿಕೃತಿಯನ್ನು ಜೆಎನ್‌ಯು ಆವರಣದಲ್ಲಿ ಮಂಗಳವಾರ ದಹಿಸಲಾಗಿದೆ.

ಇದನ್ನು ಖಂಡಿಸಿರುವ ಬಿಜೆಪಿ ಕಾರ್ಯಕರ್ತರು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಮಮತಾ ಬ್ಯಾನರ್ಜಿ ಅವರ ಭಾವಚಿತ್ರಗಳನ್ನೊಳಗೊಂಡ ಪ್ರತಿಕೃತಿಯನ್ನು ದಹಿಸಿ ಪ್ರತಿಭಟನೆ ವ್ಯಕ್ತಪಿಡಿದ್ದಾರೆ.

No Comments

Leave A Comment