Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಮಧ್ಯಪ್ರದೇಶದಲ್ಲಿ ಕಂದಕಕ್ಕೆ ಉರುಳಿದ ಬಸ್‌: 15ಕ್ಕೂ ಹೆಚ್ಚು ಸಾವು

555ಭೂಪಾಲ್‌ : ಮಧ್ಯಪ್ರದೇಶದ ರತ್ಲಮ್‌ ಎಂಬಲ್ಲಿ ಶುಕ್ರವಾರ ಬೆಳಗ್ಗೆ 40 ಜನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ  ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಾಪಾತಕ್ಕೆ ಬಿದ್ದು ನೀರಿನಲ್ಲಿ ಮುಳುಗಿದೆ. ಭೀಕರ ದುರಂತದಲ್ಲಿ 15 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಅವಘಡದ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳೀಯರು ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.  ಸ್ಥಳಕ್ಕೆ ಅಗ್ನಿಶಾಮಕದಳದ ಸಿಬಂದಿಗಳು, ಪೊಲೀಸರು ಆಗಮಿಸಿ ಜೆಸಿಬಿ ಯಂತ್ರದ ಮೂಲಕ ಬಸ್ಸನ್ನು ಮೇಲಕ್ಕೆತ್ತಿದ್ದಾರೆ. ರಕ್ಷಣೆಗೊಳಗಾದ 10ಕ್ಕೂ ಹೆಚ್ಚು ಮಂದಿಯನ್ನು ರತ್ಲಮ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈಗಾಗಲೇ 10 ಮಂದಿಯ ಶವಗಳನ್ನು ನೀರಿನಿಂದ ಮೇಲಕ್ಕೆತ್ತಿದ ಬಗ್ಗೆ ವರದಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ. ಕೆಲ ಸ್ಥಳೀಯರ ಪ್ರಕಾರ ಚಾಲಕ ಮೀತಿ ಮೀರಿದ ವೇಗದಲ್ಲಿ ಬಸ್‌ ಚಲಾಯಿಸುತ್ತಿದ್ದುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ.

No Comments

Leave A Comment