Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಭಾರತದ ವಾಯುಪಡೆಗೆ ಎಸ್-400 ಟ್ರಯಂಫ್ ಬಲ

triumfಪಣಜಿ: ಗೋವಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಸಮಾವೇಶದ ಮೊದಲ ದಿನ ರಷ್ಯಾದ ಅತ್ಯಾಧುನಿಕ ಎಸ್-400 ಟ್ರಯಂಫ್ ಏರ್ ಡಿಫೆನ್ಸ್ ಸಿಸ್ಟಮ್ ಖರೀದಿಸುವ ಮಹತ್ವದ ಒಪ್ಪಂದಕ್ಕೆ ಭಾರತ ಸಹಿ ಹಾಕಿದೆ.

ಎಸ್-400 ಟ್ರಯಂಫ್ ರಷ್ಯಾದ ಅತ್ಯಾಧುನಿಕ ತಂತ್ರಜ್ಞಾನವಾಗಿದೆ. ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಇರಾಕ್ ಮತ್ತು ಸಿರಿಯಾ(ಇಸಿಸ್) ಉಗ್ರರ ವಿರುದ್ಧ ಹೋರಾಟಕ್ಕೆ ಇದನ್ನು ರಷ್ಯಾ ಬಳಸಿಕೊಳ್ಳುತ್ತಿದೆ.

ಭಾರತ 5 ಏರ್ ಡಿಫೆನ್ಸ್ ಸಿಸ್ಟಮ್ ಗಳನ್ನು 33 ಸಾವಿರ ಕೋಟಿ ರು. ವೆಚ್ಚದಲ್ಲಿ ಖರೀದಿಸಲಿದೆ. ಈ ಕ್ಷಿಪಣಿ 400 ಕಿ.ಮೀ ದೂರದಲ್ಲಿರುವ ಗುರಿಯನ್ನು ತಲುಪುವ ಸಾಮರ್ಥ್ಯ ಹೊಂದಿದೆ. ಅಮೆರಿಕ ಸುಧಾರಿತ ಎಫ್-35 ಯುದ್ಧ ವಿಮಾನವನ್ನೂ ಹೊಡೆದುರುಳಿಸುವ ಶಕ್ತಿ ಈ ಕ್ಷಿಪಣಿ ವ್ಯವಸ್ಥೆಗಿದೆ.

No Comments

Leave A Comment