Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಶಿವಾಜಿನಗರ: ಹಾಡಹಗಲೇ ಆರ್‌ಎಸ್‌ಎಸ್‌ ಕಾರ್ಯಕರ್ತನ ಬರ್ಬರ ಹತ್ಯೆ

murderಬೆಂಗಳೂರು : ಶಿವಾಜಿ ನಗರದ ಕಮರ್ಷಿಯಲ್‌ ಸ್ಟ್ರೀಟ್‌ನ ಕಾಮರಾಜ ರಸ್ತೆಯಲ್ಲಿ ಭಾನುವಾರ ಹಾಡಹಗಲೇ ಆರ್‌ಎಸ್‌ಎಸ್‌ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಪಲ್ಸರ್‌ ಬೈಕ್‌ ನಲ್ಲಿ ಹೆಲ್ಮೆಟ್‌ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್‌(35) ಅವರನ್ನು ಬರ್ಬವಾಗಿ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಗಣವೇಷದಲ್ಲಿದ್ದ ರುದ್ರೇಶ್‌ ಅವರು ಶಾಖೆ ಮುಗಿಸಿ ಬರುತ್ತಿದ್ದ ವೇಳೆ ಮಾರಾಕಾಯುಧಗಳಿಂದ ನಡೆದ ಮಾರಣಾಂತಿಕ ಹಲ್ಲೆಯಿಂದ ತೀವ್ರ ರಕ್ತಸ್ರಾವಕ್ಕೊಳಗಾಗಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ರುದ್ರೇಶ್‌ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರುದ್ರೇಶ್‌ ಶಿವಾಜಿ ನಗರ ನಿವಾಸಿಯಾಗಿದ್ದು ಕಳೆದ 15 ವರ್ಷಗಳಿಂದ ಆರ್‌ಎಸ್‌ಎಸ್‌ ಕಾರ್ಯಕರ್ತರಾಗಿದ್ದರು  ಎಂದು ಹೇಳಲಾಗಿದೆ.

ಸ್ಥಳದಲ್ಲಿ ಬಿಗು ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ.

No Comments

Leave A Comment