Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಕೆಪಿಎಸ್ ಸಿ: ನೇಮಕಾತಿ ರದ್ದು ಮಾಡಿದ್ದ ಸರ್ಕಾರದ ಆದೇಶವನ್ನೇ ರದ್ದು ಮಾಡಿದ ಕೆಎಟಿ

kpsc_katಬೆಂಗಳೂರು: 2011ರ ಕೆಪಿಎಸ್ ಸಿ ನೇಮಕಾತಿ ಹಗರಣ ಸಂಬಂಧ ಉದ್ಯೋಗಾಂಕ್ಷಿಗಳಲ್ಲಿ ಕರ್ನಾಟಕ ಕಾನೂನಾತ್ಮಕ ನ್ಯಾಯ ಮಂಡಳಿ ದೊಡ್ಡ ನಿರಾಳ ಮೂಡಿಸಿದ್ದು, ನೇಮಕಾತಿ ಆದೇಶ ರದ್ದು  ಮಾಡಿದ್ದ ಸರ್ಕಾರದ ಆದೇಶವನ್ನೇ ಕೆಎಟಿ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಕೆಪಿಎಸ್ ಸಿ ಅಭ್ಯರ್ಥಿಗಳಿಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಇಂದು ಶುಭ ಸುದ್ದಿ ನೀಡಿದ್ದು,  2011ರ ಕೆಪಿಎಸ್‌ಸಿ ನೇಮಕಾತಿ ರದ್ದುಗೊಳಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ  ಕರ್ನಾಟಕ ಸರ್ಕಾರ ನೀಡಿದ್ದ ಆದೇಶವನ್ನು ಕೆಎಟಿ ರದ್ದುಗೊಳಿಸಿದೆ. 362 ಅಭ್ಯರ್ಥಿಗಳಿಗೆ ಕೆಲಸ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಕೆಎಟಿ ಸೂಚನೆ ನೀಡಿದ್ದು, ಅಂತಿಮ ಪಟ್ಟಿಯಲ್ಲಿ ಆಯ್ಕೆಯಾಗಿದ್ದ   ಅಭ್ಯರ್ಥಿಗಳನ್ನು ಎರಡು ತಿಂಗಳೊಳಗೆ ನೇಮಕ ಮಾಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇರೆಗೆ ತನಿಖೆ ನಡೆಸಿದ್ದ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡಿದ್ದರು. ತನಿಖಾ ವರದಿ ಕೈ ಸೇರಿದ ಬಳಿಕ ರಾಜ್ಯ ಸರ್ಕಾರ  ಬಳಿಕ 2011ರ ನೇಮಕಾತಿಯನ್ನೇ ರದ್ದು ಮಾಡಿ ಆದೇಶ ಹೊರಡಿಸಿತ್ತು. ಎಲ್ಲ  362 ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು.

ಸರ್ಕಾರದ ಆದೇಶದ ವಿರುದ್ಧ  ಸಿಡಿದೆದ್ದಿದ್ದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಹೋರಾಟ ಮಾಡಿದ್ದರು. ಅಲ್ಲದೆ ಸರ್ಕಾರದ ಕ್ರಮವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಮುಂದೆ ಪ್ರಶ್ನಿಸಿದ್ದರು.ಖ್ಯಾತ ವಕೀಲ ಬಿವಿ ಆಚಾರ್ಯ ಅವರು ನೊಂದ ಉದ್ಯೋಗಾಕಾಂಕ್ಷಿಗಳ ಪರ ವಕಾಲತ್ತು ವಹಿಸಿಕೊಂಡಿದ್ದರು.

2011ನೇ ಸಾಲಿನ ಎ ಹಾಗೂ ಬಿ ದರ್ಜೆ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದ ಆಯ್ಕೆ ಪಟ್ಟಿ ರದ್ದುಗೊಳಿಸಿರುವ ಸರ್ಕಾರದ ನಿರ್ಧಾರವನ್ನು ಅರ್ಜಿದಾರರು ಕೆಎಟಿಯಲ್ಲಿ ಪ್ರಶ್ನಿಸಿದ್ದರು.

362  ಹುದ್ದೆಗಳ ನೇಮಕಕ್ಕೆ ಕೆಪಿಎಸ್‌ಸಿ 2014 ಮಾರ್ಚ್ 21ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಈ ಅಂತಿಮ ಪಟ್ಟಿಯಲ್ಲಿ ಆಯ್ಕೆಯಾಗದ ಅಭ್ಯರ್ಥಿಗಳು ಕೂಡಾ ಪಟ್ಟಿ ಬಗ್ಗೆ ಸಂಶಯ  ವ್ಯಕ್ತಪಡಿಸಿದ್ದರು. ಪ್ರಕರಣ ಸಿಐಡಿ ತನಿಖೆಗೆ ಒಳಪಟ್ಟು, ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಬಯಲಿಗೆ ಬಂದಿತ್ತು. ಸರ್ಕಾರದ ನಿರ್ಧಾರ ವಿರೋಧಿಸಿ ಒಂದು ತಿಂಗಳ ಕಾಲ  ಫ್ರೀಡಂಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದರು.

No Comments

Leave A Comment