Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಆಂಧ್ರ ಪ್ರದೇಶದ ಪಾಲಿನ ನೀರನ್ನೇ ಹಂಚಿಕೆ ಮಾಡಿಕೊಳ್ಳಿ: ಕೃಷ್ಣಾ ನ್ಯಾಯಾಧಿಕರಣ ಮಹತ್ವದ ತೀರ್ಪು

krishna-tribunalನವದೆಹಲಿ: ನಾಲ್ಕು ರಾಜ್ಯಗಳಲ್ಲಿ ವಿವಾದಕ್ಕೆ ಕಾರಣವಾಗಿದ್ದ ಕೃಷ್ಣಾ ನದಿ ನೀರಿನ ಹಂಚಿಕೆ ಸಂಬಂಧ ನ್ಯಾಯಾಧಿಕರಣ ಮಹತ್ವದ ತೀರ್ಪು ನೀಡಿದ್ದು, ತೆಲಂಗಾಣ ರಾಜ್ಯ ಆಂಧ್ರ  ಪ್ರದೇಶದೊಂದಿಗೆ ನೀರು ಹಂಚಿಕೆ ಮಾಡಿಕೊಳ್ಳಬೇಕು ಎಂದು ಆದೇಶಿಸಿದೆ.

2013ರಲ್ಲಿ ನೀಡಿದ್ದ ಕೃಷ್ಣಾ ನದಿ ಐ ತೀರ್ಪನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಆಂಧ್ರ ಪ್ರದೇಶ ರಾಜ್ಯಕ್ಕೆ ಹಂಚಿಕೆ ಮಾಡಲಾಗಿರುವ ನೀರಲ್ಲೇ ತೆಲಂಗಾಣ ರಾಜ್ಯ ಕೂಡ ಹಂಚಿಕೆ  ಮಾಡಿಕೊಳ್ಳಬೇಕು ಎಂದು ಆದೇಶಿಸಿದೆ. ಯೋಜನಾವಾರು ನೀರು ಹಂಚಿಕೆ ಮಾಡುವಂತೆ ತೆಲಂಗಾಣ ರಾಜ್ಯ ಸಲ್ಲಿಸಿದ್ದ ಅರ್ಜಿಯ ಇತ್ಯರ್ಥ ಪಡಿಸಿದ ಕೃಷ್ಣಾ ನ್ಯಾಯಾಧಿಕರಣದ ಅಧ್ಯಕ್ಷ  ನ್ಯಾ.ಬ್ರಿಜೇಶ್ ಕುಮಾರ್ ಅವರು, ತೆಲಂಗಾಣಕ್ಕಾಗಿ ಐ ತೀರ್ಪನ್ನು ಮರು ಪರಿಶೀಲಿಸುವ ಅಗತ್ಯವಿಲ್ಲ. ಹೀಗಾಗಿ ಈ ಹಿಂದೆ ಆಂಧ್ರ ಪ್ರದೇಶಕ್ಕೆ ಹಂಚಿಕೆ ಮಾಡಲಾಗಿರುವ ನೀರಲ್ಲೇ ತೆಲಂಗಾಣಕ್ಕೂ ನೀರು ಬಿಡುಗಡೆ ಮಾಡಬೇಕು ಎಂದು ಹೇಳಿದೆ.

ಅಂತೆಯೇ ಮುಂದಿನ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿದೆ.ನ್ಯಾಯಾಧಿಕರಣದ ತೀರ್ಪಿನಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ದೊಡ್ಡ ರಿಲೀಫ್ ಸಿಕ್ಕಿದ್ದು, ಮಹಾರಾಷ್ಟ್ರ ಮತ್ತು ಕರ್ನಾಟಕ ಪಾಲಿನ ನೀರಿನ ಹಂಚಿಕೆಯಲ್ಲಿ ಯಾವುದೇ  ಬದಲಾವಣೆ ಇಲ್ಲ ಎಂದು ನ್ಯಾಯಾಧಿಕರಣ ಹೇಳಿದೆ.2010ರಲ್ಲಿ ಕೃಷ್ಣಾ ನದಿ ನ್ಯಾಯಾಧಿಕರಣ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ನಡುವೆ ನೀರು ಹಂಚಿಕೆ ಮಾಡಿ ಆದೇಶ ಹೊರಡಿಸಿತ್ತು.

ಆದರೆ ಇದಕ್ಕೆ ಮೂರು ರಾಜ್ಯಗಳ ಮಧ್ಯೆ  ಅಪಸ್ವರ ಇತ್ತು. 2010ರಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಅಂತಿಮ ತೀರ್ಪು ಬಂದ ಬಳಿಕ ಆಂಧ್ರಪ್ರದೇಶ ಇನ್ನಷ್ಟು ನೀರು ಬೇಕು ಎಂದು ನ್ಯಾಯಾಧಿಕರಣದಲ್ಲಿ ಮರು ಅರ್ಜಿಯನ್ನು ಸಲ್ಲಿಸಿತ್ತು.  2013ರಲ್ಲಿ ಕರ್ನಾಟಕದ ಪಾಲಿನ 911 ಟಿಎಂಸಿ ನೀರಿನಲ್ಲಿ 4 ಟಿಎಂಸಿ ನೀರನ್ನು ಆಂಧ್ರಪ್ರದೇಶಕ್ಕೆ ಬಿಡುವಂತೆ ನ್ಯಾಯಾಧಿಕರಣ ಆದೇಶ ನೀಡಿತ್ತು.

ಅದರಂತೆ ಮಹಾರಾಷ್ಟಕ್ಕೆ 666 ಟಿಎಂಸಿ,  ಕರ್ನಾಟಕಕ್ಕೆ 907 ಟಿಎಂಸಿ ಹಾಗೂ ಆಂಧ್ರಪ್ರದೇಶಕ್ಕೆ 1005 ಟಿಎಂಸಿ ನೀರು ಹಂಚಿಕೆಯಾಗಬೇಕೆಂದು ಆದೇಶಿಸಲಾಗಿತ್ತು.ಈ ನಡುವೆ ಪ್ರತ್ಯೇಕ ತೆಲಂಗಾಣ ರಾಜ್ಯರಚನೆಯಾದ ಬಳಿಕ ತೆಲಂಗಾಣ ಸರ್ಕಾರ ಮತ್ತೆ ನದಿ ನೀರು ಹಂಚಿಕೆ ಮಾಡಬೇಕು ಎಂದು ವಾದಿಸುತ್ತಿತ್ತು.

ಈ ಹಿಂದೆ ಘೋಷಣೆಯಾಗಿದ್ದ ಮೂರು  ರಾಜ್ಯಗಳ ಬದಲಿಗೆ ನೂತನ ತೆಲಂಗಾಣ ರಾಜ್ಯ ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳ ನಡುವೆ ಕೃಷ್ಣಾ ನದಿ ನೀರು ಮರುಹಂಚಿಕೆ ಮಾಡಬೇಕು ಎಂದು ತೆಲಂಗಾಣ ಅರ್ಜಿ ಸಲ್ಲಿಸಿತ್ತು.ಆದರೆ ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಆಂಧ್ರಪ್ರದೇಶದಿಂದ ತೆಲಂಗಾಣ ಪ್ರತ್ಯೇಕವಾದ್ದವು.

No Comments

Leave A Comment