Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಕಾಟನ್ ಬಟ್ಟೆ ಕಂಪನಿ ಗೋದಾಮಿಗೆ ಬೆಂಕಿ: ಐವರ ದುರ್ಮರಣ

fire-newಪುಣೆ: ಕಾಟನ್ ಬಟ್ಟೆ  ಕಂಪನಿ ಗೋದಾಮಿಗೆ  ಬೆಂಕಿಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು ಐದು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಪುಣೆಯಲ್ಲಿ ನಡೆದಿದೆ.

ಪುಣೆಯಿಂದ 45 ಕಿಮೀ ದೂರದ ಹೊರವಲಯಲ್ಲಿರುವ ಕರಬ್ವಾಡಿಯಲ್ಲಿ ಇಂದು ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದೆ, ಗೋಡೋನ್ ನಲ್ಲಿದ್ದ ಕಾರ್ಮಿಕರು ಹೊರ ಬರಲಾಗದಂತೆ ಕೆಲವೇ ಕ್ಷಣದಲ್ಲಿ ಬೆಂಕಿ ಎಲ್ಲೆಡೆ ಆವರಿಸಿಕೊಂಡಿದೆ.

ಗೋದಾಮಿನಲ್ಲಿದ್ದ ಐವರು ಕೆಲಸಗಾರರು ಹೇಗೋ ಬೆಂಕಿಯಿಂದ ತಪ್ಪಿಸಿಕೊಂಡು ಹೊರ ಬಂದಿದ್ದಾರೆ.ಸ್ಥಳಕ್ಕಾಗಮಿಸಿದ ಐದು ಅಗ್ನಿಶಾಮಕ ವಾಹನ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ, ಮೃತ ಪಟ್ಟ ಐವರು ಕಂಪನಿಯ ಕೆಲಸಗಾರರಾಗಿದ್ದಾರೆ.

No Comments

Leave A Comment