Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಕಾಂಗ್ರೆಸ್ ಪಕ್ಷವನ್ನು ಪ್ರಶಾಂತ್ ಕಿಶೋರ್ ಗೆ ಗುತ್ತಿಗೆ ನೀಡಲಾಗಿದೆ: ರೀಟಾ ಬಹುಗುಣಾ ಜೋಷಿ

rita-bahuguna-4ನವದೆಹಲಿ: ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಉತ್ತರ ಪ್ರದೇಶದ ರಾಜಕಾರಣಿ ರೀಟಾ ಬಹುಗುಣಾ ಜೋಷಿ ಪಕ್ಷದ ಆಂತರಿಕ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಚುನಾವಣಾ ಕಾರ್ಯತಂತ್ರ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಗೆ ಗುತ್ತಿಗೆ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸೇರ್ಪಡೆಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ರೀಟಾ ಬಹುಗುಣ ಜೋಷಿ, ಪ್ರಶಾಂತ್ ಕಿಶೋರ್ ಚುನಾವಣಾ ತಂತ್ರಗಾರರೇ ಹೊರತು ಪಕ್ಷಕ್ಕೆ ನಿರ್ದೇಶನ ನೀಡುವವರಲ್ಲ. ಆದರೆ ದುರದೃಷ್ಟವೆಂಬಂತೆ ಉತ್ತರ ಪ್ರದೇಶದಲ್ಲಿ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ನಿರ್ದೇಶನ ನೀಡುತ್ತಿದ್ದಾರೆ ಎಂದಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದು ಸ್ಥಳೀಯ ನಾಯಕರ ಅಭಿಪ್ರಾಯವನ್ನು ಕೇಳುತ್ತಿಲ್ಲ ಎಂಬ ಗಂಭೀರ ಆರೋಪ ಮಾಡಿದ್ದಾರೆ.”ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಏನೇ ನಿರ್ಧಾರ ಕೈಗೊಂಡಿದ್ದರೂ ನಮ್ಮ ಅಭಿಪ್ರಾಯಗಳನ್ನು ಆಲಿಸುತ್ತಿದ್ದರು.

ಆದರೆ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ನಮ್ಮ ಅಭಿಪ್ರಾಯಗಳನ್ನು ತಿಳಿಸುವುದಕ್ಕೂ ಅವಕಾಶ ಇಲ್ಲ. ರಾಹುಲ್ ಗಾಂಧಿ ಅವರ ನಾಯಕತ್ವವನ್ನು ದೇಶ ಹೇಗೆ ತಿರಸ್ಕರಿಸಿದೆಯೋ ಹಾಗೆಯೇ ಉತ್ತರ ಪ್ರದೇಶವು ತಿರಸ್ಕರಿಸಿದ್ದು ಕಾಂಗ್ರೆಸ್ ನ ಹಿರಿಯ ನಾಯಕರೂ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ ಹೊಂದಿದ್ದಾರೆ”.  ಎಂದು ಹೇಳಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ಅವರು ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಾಗಿ ರಕ್ತದ ದಲ್ಲಾಳಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿ ಅವರ ಹೇಳಿಕೆಯಿಂದ ನೋವುಂಟಾಗಿದೆ ಎಂದು ಹೇಳಿದ್ದಾರೆ.

No Comments

Leave A Comment