Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ಜಯಾ ಚೇತರಿಕೆಗಾಗಿ ಚಾಮುಂಡೇಶ್ವರಿಗೆ ರು.1.61 ಕೋಟಿ ಚಿನ್ನದ ಕಾಣಿಕೆ

chamundiಮೈಸೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಆಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿ ಚಾಮುಂಡೇಶ್ವರಿ ದೇವಾಲಯಕ್ಕೆ 1.61 ಕೋಟಿ ರುಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಅಭಿಮಾನಿಗಳು ಕಾಣಿಕೆಯಾಗಿ ನೀಡಿದ್ದಾರೆ.
 
ಜಯಲಲಿತಾ ಅವರ ಆರಾಧ್ಯ ದೇವಿಯಾಗಿರುವ ಚಾಮುಂಡೇಶ್ವರಿಗೆ ಚಿನ್ನದ ಮುಖವಾಡ, ಆಯುಧಗಳು ಸೇರಿದಂತೆ ದೇವಸ್ಥಾನದ ಆವರಣದಲ್ಲಿರುವ ಗಣಪತಿ,ಹನುಮಂತನ ವಿಗ್ರಹಗಳಿಗೂ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಾಣಿಕೆಯ ರೂಪದಲ್ಲಿ ನೀಡಲಾಗಿದೆ.
 
ಜಯಾ ಪಬ್ಲಿಕೇಷನ್ಸ್‌ ಎನ್ನುವ ಹೆಸರಿನಲ್ಲಿ 1.61 ಕೋಟಿ ರುಪಾಯಿ ಮೌಲ್ಯದ ಚಿನ್ನಾಭರಣಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ.
 
ಸೆ.22ರಿಂದ ಜಯಲಲಿತಾ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆ ಮೂಲಗಳ ಪ್ರಕಾರ ತಮಿಳುನಾಡು ಸಿಎಂ ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದು, ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ.
No Comments

Leave A Comment