Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಕಾಂಗ್ರೆಸ್‌ ಸರಕಾರ ಉರುಳಿಸಲು ದೇವೇಗೌಡ ಒಳಸಂಚು : ಪೂಜಾರಿ

janardhana-poojaryಮಂಗಳೂರು : ‘ರಾಜ್ಯದ ಕಾಂಗ್ರೆಸ್‌ ಸರಕಾರವನ್ನು ಉರುಳಿಸಲು ಮಾಜಿ ಪ್ರಧಾನಿ ಜೆಡಿಎಸ್‌ ವರಿಷ್ಟ ಎಚ್‌.ಡಿ.ದೇವೇಗೌಡ ಅವರು ಸಂಚು ರೂಪಿಸಿದ್ದಾರೆ’ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಜನಾರ್ದನ ಪೂಜಾರಿ ಗಂಭೀರ ಆರೋಪ ಮಾಡಿದ್ದಾರೆ.

ಶನಿವಾರ ನಗರದ ಪ್ರಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಸಿ.ಎಂ ಇಬ್ರಾಹಿಂ ಅವರನ್ನು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನದಿಂದ ವಜಾ ಮಾಡಲು ಆಗ್ರಹಿಸಿದರು. ಜೆಡಿಎಸ್‌ನಿಂದ ಬಂದಿರುವ ಸಿದ್ದರಾಮಯ್ಯ ಮತ್ತು ಸಿ.ಎಂ.ಇಬ್ರಾಹಿಂ ರಂತಹವರು ಪಕ್ಷ ಕ್ಕೆ ಶಕ್ತಿ ತುಂಬುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು. ಸಿಎಂಗೆ ತಾಕತ್ತಿದ್ದರೆ ಇಬ್ರಾಹಿಂ ಅವರನ್ನು ಕೂಡಲೆ ವಜಾ ಮಾಡಲು ಆಗ್ರಹಿಸಿದರು.

ನೇತ್ರಾವತಿ ನದಿ ತಿರುವು ಯೋಜನೆ ಕುರಿತು ಆಕ್ರೋಶ ವ್ಯಕ್ತ ಪಡಿಸಿದ ಅವರು ರಾಜ್ಯ ಸರಕಾರ ನೇತ್ರಾವತಿ ನದಿಯನ್ನು ಕೊಲೆ ಮಾಡಲು ಮುಂದಾಗಿದೆ. ಕರಾವಳಿಯನ್ನು ಬಂಜರು ಭೂಮಿಯನ್ನಾಗಿ ಮಾಡಲು ಮುಂದಾಗಿದೆ.ಇದಕ್ಕೆ ಜಿಲ್ಲೆಯ ಮಾಜಿ ಮುಖ್ಯಮಂತ್ರಿಗಳಿಬ್ಬರು ಸಲಹೆಗಳನ್ನು ನೀಡುತ್ತಿದ್ದಾರೆ ಎಂದು ವೀರಪ್ಪ ಮೊಯ್ಲಿ ಮತ್ತು ಡಿ.ವಿ.ಸದಾನಂದಗೌಡ ವಿರುದ್ದ ಕಿಡಿ ಕಾರಿದರು.

ತ್ರಿವಳಿ ತಲಾಕ್‌ ಕುರಿತು ಕೇಳಿದಾಗ ಈ ಬಗ್ಗೆ ಮುಸ್ಲಿಂ ಮಹಿಳೆಯರೆ ಸಂಘಟಿತರಾಗಿ ಹೋರಾಟ ಮಾಡಬೇಕು ಎಂದರು.

No Comments

Leave A Comment