Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಇಬ್ಬರು ಜೈಶ್ ಎ ಮೊಹಮ್ಮದ್ ಉಗ್ರರ ಬಂಧನ; ಎಕೆ 47, ಗ್ರನೇಡ್ ಗಳ ವಶ

indian-armyಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮೂಲಾ ಜಿಲ್ಲೆಯ ಕಾನಿಷ್ ಪೋರಾ ಪ್ರದೇಶದಲ್ಲಿ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರರನ್ನು ಭಾರತೀಯ ಸೇನೆ ಯೋಧರು ಬಂಧಿಸಿದ್ದು, ಅವರಿಂದ ಕೆಲ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಉಗ್ರರಿಂದ ಒಂದು ಎಕೆ 47 ರೈಫಲ್, ಒಂದು ಪಿಸ್ತೂಲ್ ಮತ್ತು ಗ್ರೆನೇಡ್ ಹಾಗೂ ಜೈಶ್ ಮತ್ತು ಹಿಜ್ಬುಲ್ ಮುಜಾಯಿದೀನ್ ಮುದ್ರೆಗಳನ್ನು ಸೇನೆ ವಶಪಡಿಸಿಕೊಂಡಿದೆ. 52ನೇ ರಾಷ್ಟ್ರೀಯ ರೈಫಲ್ ಪಡೆ ಮತ್ತು ವಿಶೇಷ ಕಾರ್ಯಾಚರಣೆ ಸಮೂಹ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಈ ಇಬ್ಬರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಬಳಿಕ ಕೆರಳಿರುವ ಉಗ್ರರು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ರಕ್ತಧೋಕುಳಿ ಹರಿಸಬೇಕೆಂದು ಯೋಜಿಸಿದ್ದು ಗಡಿ ನುಸುಳುವಿಕೆಗಳು ಹೆಚ್ಚಾಗಿವೆ. ಇನ್ನು ಭಯೋತ್ಪಾದಕರ ವಿರುದ್ಧ ಸಮರೋಪಾದಿಯ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆ ಹಲವು ಗಡಿ ನುಸುಳಿವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ.
No Comments

Leave A Comment