Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಜಪಾನ್ ಉದ್ಯಾನವನದಲ್ಲಿ ಸರಣಿ ಸ್ಫೋಟ: ಮೂವರಿಗೆ ಗಾಯ, ಓರ್ವ ಸಾವು

japan-blastಜಪಾನ್: ಜಪಾನ್ ರಾಷ್ಟ್ರದ ಉದ್ಯಾನವನದಲ್ಲಿ ಸರಣಿ ಸ್ಫೋಟವೊಂದು ಸಂಭವಿಸಿದ್ದು, ಪರಿಣಾಮ ಮೂವರು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.ಉತ್ತರ ಟೋಕಿಯೋಯಿಂದ 100 ಕಿ.ಮೀ ದೂರದಲ್ಲಿರುವ ಉತ್ಸುನೊಮಿಯಾ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ 11.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾಯಗೊಂಡಿರುವ ಮೂವರ ಪೈಕಿ ಓರ್ವವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿತ್ತು. ಇದೀಗ ಆ ವ್ಯಕ್ತಿ ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.ಉದ್ಯಾನವನದಲ್ಲಿರುವ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟಕ್ಕೆ ಮೂಲ ಕಾರಣಗಳು ಈ ವರೆಗೂ ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment