Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಇರಾಕ್ ದಾಳಿ ಅಂತ್ಯ, 74 ಐಎಸ್ ಉಗ್ರರ ಹತ್ಯೆ: ಗವರ್ನರ್

isisಕಿರ್ಕುಕ್: ಇರಾಕ್ ನ ಕಿರ್ಕುಕ್ ನಗರದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಇರಾಕಿ ಭದ್ರತಾ ಪಡೆಗಳು ಸೋಮವಾರ ಅಂತ್ಯಗೊಳಿಸಿದ್ದು, ಕಳೆದ ಮೂರು ದಿನಗಳಲ್ಲಿ ಕನಿಷ್ಠ 74 ಜಿಹಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪ್ರಾಂತೀಯ ಗರ್ವನರ್ ತಿಳಿಸಿದ್ದಾರೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಈಗ ಜನಜೀವನ ಸಹಜ ಸ್ಥಿತಿಗೆ ಮರಳಿದೆ ಎಂದು ಕಿರ್ಕುಕ್ ಪ್ರಾಂತ್ಯದ ಗವರ್ನರ್ ನಜ್ಮೆದ್ದಿನ್ ಕರಿಮ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಸುಮಾರು 74 ಐಎಸ್ ಉಗ್ರರನ್ನು ಹತ್ಯೆ ಮಾಡಿದ್ದಾರೆ ಮತ್ತು ಐಎಸ್ ಸಂಘಟನೆಯ ನಾಯಕರು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
No Comments

Leave A Comment