Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಜೆಎನ್ ಯು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!

brahmapuನವದೆಹಲಿ: ದೆಹಲಿಯ ಪ್ರತಿಷ್ಛಿತ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿರುವ ವಿದ್ಯಾರ್ಥಿನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಮಂಗಳವಾರ ಸಂಜೆ ವಿದ್ಯಾರ್ಥಿ ಮಣಿಪುರ ಮೂಲದ ಜೆಆರ್ ಫಿಲೆಮಾನ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ  ತಿಳಿದುಬಂದಿಲ್ಲವಾದರೂ, ಕಳೆದ ಮೂರು ದಿನಗಳಿಂದ ವಿದ್ಯಾರ್ಥಿ ನಾಪತ್ತೆಯಾಗಿದ್ದ ಎಂದು ಆತನ ಸಹಪಾಠಿಗಳು ತಿಳಿಸಿದ್ದಾರೆ.

ವಿವಿ ಆವರಣದಲ್ಲಿರುವ ಬ್ರಹ್ಮಪುತ್ರ ವಿದ್ಯಾರ್ಥಿನಿಲಯದ  ಕೊಠಡಿಯಲ್ಲಿ ಫಿಲೆಮಾನ್ ಶವಪತ್ತೆಯಾಗಿದ್ದು, ಶವ ಕಂಡ ಕೂಡಲೇ ವಿದ್ಯಾರ್ಥಿಗಳು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.ಘಟನಾ ಸ್ಥಳಕ್ಕೆ ಧಾವಿಸಿರುವ ಜೆಎನ್ ಯು ಪೊಲೀಸರು ಶವದ ಮಹಜರು ಮಾಡಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಎಬಿವಿಪಿ ಸಂಘಟನೆಯೊಂದಿಗೆ ಜಗಳ ಮಾಡಿಕೊಂಡಿದ್ದ ನಜೀಬ್ ಅಹ್ಮದ್ ಎಂಬಾತ ಕೂಡ ಈ ಹಿಂದೆ ನಾಪತ್ತೆಯಾಗಿದ್ದ.

ಈ ಹಿನ್ನಲೆಯ ಆತನಮ ಪೋಷಕರು ಹಾಗೂ ವಿದ್ಯಾರ್ಥಿಗಳು ಕಳೆದ  ಅಕ್ಟೋಬರ್ 15ರಂದು ಭಾರಿ ಪ್ರತಿಭಟನೆ ನಡೆಸಿದ್ದರು. ಇದೇ ಕಾರಣಕ್ಕೆ ವಿವಿಯ ಉಪಕುಲಪತಿಗಳನ್ನು ಹಾಗೂ ಇತರೆ ಅಧಿಕಾರಿಗಳನ್ನು ಪ್ರತಿಭಟನಾಕಾರರು ಕೊಠಡಿಯಲ್ಲಿ ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ದರು.

No Comments

Leave A Comment