Log In
BREAKING NEWS >
ಶರತ್ ಮಡಿವಾಳ ಹತ್ಯೆ: ಆರೋಪಿ ಮಹಮದ್ ಷರೀಫ್ ಗೆ ಹೈಕೋರ್ಟ್ ಜಾಮೀನು....

ಮೈಸೂರಿನಲ್ಲಿ ಲಾರಿ-ಬಸ್ ಮುಖಾಮುಖಿ ಡಿಕ್ಕಿ; ಐವರ ದುರ್ಮರಣ

accidentಮೈಸೂರು: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬಸ್ ಚಾಲಕ ಸೇರಿ ಐವರು ದಾರುಣ ಸಾವನ್ನಪ್ಪಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಧುಗಿರಿಕೊಪ್ಪಳು ಬಳಿ ಈ ಅಪಘಾತ ಸಂಭವಿಸಿದ್ದು, ಸರ್ಕಾರಿ ಚಾಲಕ ಹಾಗೂ ನಿರ್ವಾಹಕ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಕೆ.ಆರ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.ಸರ್ಕಾರಿ ಬಸ್ ಚಾಲಕ 45 ವರ್ಷದ ಸದಾಶಿವ ಹಾಗೂ ನಿರ್ವಾಹಕ 28 ವರ್ಷದ ದೇವರಾಜ್ ಎಂದು ಗುರುತಿಸಲಾಗಿದೆ.

ಬಸ್ ವಿರಾಜಪೇಟೆಯಿಂದ ಮೈಸೂರಿಗೆ ಬರುತ್ತಿತ್ತು. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment