Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ವಾರಣಾಸಿಯಲ್ಲಿ ಸ್ಫೋಟ; ಐವರ ಸಾವು

varanasiವಾರಣಾಸಿ: ವಾರಣಾಸಿಯಲ್ಲಿ ಘಟಿಸಿರುವ ಸ್ಫೋಟಕ್ಕೆ ಐವರು ಸಾವನ್ನಪ್ಪಿದ್ದು, ಆರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.
“ಮೇಲ್ನೋಟಕ್ಕೆ, ದೀಪಾವಳಿ ಹಬ್ಬಕ್ಕೆ ಶೇಖರಿಸಿದ್ದ ಪಟಾಕಿಗಳು ಸಿಡಿದು ಈ ಸ್ಫೋಟ ಸಂಭವಿಸಿದೆ ಎಂದೆನಿಸುತ್ತದೆ” ಎಂದು ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ ನಿತಿನ್ ತಿವಾರಿ ಹೇಳಿದ್ದಾರೆ.
ಮೃತಪಟ್ಟವರಲ್ಲಿ ಇಬ್ಬರನ್ನು ಆಮ್ನ ಮತ್ತು ಸರ್ಫರಾಜ್ ಎಂದು ಗುರುತಿಸಲಾಗಿದ್ದು, ಉಳಿದವರ ಗುರುತು ಇನ್ನು ತಿಳಿಯಬೇಕಿದೆ.
ರಾಷ್ಟ್ರೀಯ ತುರ್ತು ನಿರ್ವಹಣಾ ಪಡೆಯ ತಂಡ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲಿಕಿರುವವರನ್ನು ರಕ್ಷಿಸಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿ ಹೇಳಿದ್ದಾರೆ.
ಪಿತರಿಕುಂಡ್ ರಸ್ತೆಯಲ್ಲಿರುವ ಎರಡು ಅಂತಸ್ತಿನ ಮನೆಯಲ್ಲಿ ಮಂಗಳವಾರ ಮಧ್ಯರಾತ್ರಿ ಈ ಸ್ಫೋಟ ಸಂಭವಿಸಿದೆ. ಗಾಯಗೊಂಡ ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
No Comments

Leave A Comment