Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ನನಗೆ 205 ಶಾಸಕರ ಬೆಂಬಲ ಇದೆ: ರಾಜ್ಯಪಾಲರಿಗೆ ಅಖಿಲೇಶ್ ಯಾದವ್

akhileshನವದೆಹಲಿ: ಸಮಾಜವಾದಿ ಪಕ್ಷದಲ್ಲಿನ ಭಿನ್ನಮತ ಹಾಗೂ ಅಸ್ಥಿರತೆ ಉಂಟಾಗಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲ ರಾಮ್ ನಾಯಕ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮಗೆ ಬಹುಮತವಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಹಾಗೂ ಅಖಿಲೇಶ್ ಯಾದವ್ ಮಧ್ಯ ತೀವ್ರ ಜಟಾಪಟಿ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಿಎಂ ರಾಜ್ಯಪಾಲರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲ ಮೂಡಿಸಿತ್ತು.

224 ಸಮಾಜವಾದಿ ಪಕ್ಷದ ಶಾಸಕರ ಪೈಕಿ ತಮಗೆ 205 ಶಾಸಕರ ಬೆಂಬಲವಿರುವ ಬಗ್ಗೆ ಸಿಎಂ ಅಖಿಲೇಶ್ ಯಾದವ್ ಅವರು ರಾಜ್ಯಪಾಲರಿಗೆ ಪತ್ರ ನೀಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ, ಅಲ್ಲದೆ ಪ್ರಸ್ತೂತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸಿಎಂ ರಾಜ್ಯಪಾಲರಿಗೆ ವಿವರಣೆ ನೀಡಿದ್ದಾರೆ ಎಂದು ರಾಜಭವನ ಮೂಲಗಳು ತಿಳಿಸಿವೆ.

ರಾಜ್ಯಪಾಲರ ಭೇಟಿಗೂ ಮುನ್ನ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದ್ದ ಅಖಿಲೇಶ್ ಯಾದವ್ ಅವರಿಗೆ ಬಹುತೇಕ ಶಾಸಕರು ಬೆಂಬಲ ನೀಡಿದ್ದಾರೆ. ಸಮಾಜವಾದಿ ಪಕ್ಷದ ಪ್ರಭಾವಿ ನಾಯಕ ಸಚಿವ ಅಜಂ ಖಾನ್ ಸಹ ಬಹಿರಂಗವಾಗಿಯೇ ಅಖಿಲೇಶ್ ಪರವಾಗಿ ಮಾತನಾಡಿದ್ದಾರೆ.

No Comments

Leave A Comment