Log In
BREAKING NEWS >
ಚು೦...ಚು೦ ಚಳಿಯಲ್ಲಿ ಬೃಹತ್ ಜನಸ್ತೋಮದ ನಡುವೆ ಪಲಿಮಾರು ಮಠಾಧೀಶರ ದ್ವಿತೀಯ ಪರ್ಯಾಯದ ಭವ್ಯ ಮೆರಣಿಗೆ...

ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: 3 ನಾಗರಿಕರಿಗೆ ಗಾಯ

pakistan-3ಜಮ್ಮು: ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸಿರುವ ಪರಿಣಾಮ 3 ನಾಗರಿಕರಿಗೆ ಗಾಯಗೊಂಡಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರದ ಹಿರಾನಗರ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸಿದ್ದು, ಇಬ್ಬರು ಯುವತಿಯರು ಹಾಗೂ ಓರ್ವ ವ್ಯಕ್ತಿ ಪಾಕ್ ಶೆಲ್ ದಾಳಿಗೆ ಸಿಲುಕಿ ಗಾಯಗೊಂಡಿದ್ದಾರೆ.

ಅ.28 ರಂದು ಬೆಳಿಗ್ಗೆ 6 ಗಂಟೆ ವರೆಗೂ ಪಾಕಿಸ್ತಾನ ಕಾಶ್ಮೀರದ ಹಲವು ಗ್ರಾಮಗಳಲ್ಲಿ ಶೆಲ್ ದಾಳಿ ನಡೆಸಿದೆ. ಪರಿಣಾಮವಾಗಿ ಗ್ರಾಮದ ಹಲವು ಮನೆಗಳಿಗೆ ಹಾನಿ ಉಂಟಾಗಿದೆ. ಪಾಕ್ ನಿರಂತರವಾಗಿ ಅಂತಾರಾಷ್ಟ್ರೀಯ ಗಾಡಿಯಲ್ಲಿ ದಾಳಿ ನಡೆಸುತ್ತಿರುವುದರಿಂದ ಸುಮಾರು 400 ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದರೆ, ಆರ್ ಎಸ್ ಪುರ ಸೆಕ್ಟರ್ ನ ಅಬ್ದುಲ್ಲಿಯನ್ ಗ್ರಾಮದ ಎಲ್ಲಾ ಕುಟುಂಬಗಳು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಂಡಿವೆ.

No Comments

Leave A Comment