Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ರುದ್ರೇಶ್ ಹತ್ಯೆ: ಆರ್‌ಎಸ್‌ಎಸ್ ವಿರುದ್ಧ ಸಿದ್ದರಾಮಯ್ಯ ಗರಂ

rss-sidduಮಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಿ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಆರ್ಎಸ್ಎಸ್ ಕೂಡ ಇಂತಹದ್ದೇ ಕೆಲಸಗಳನ್ನು ಮಾಡುತ್ತಿದೆ ಅದನ್ನು ಏನು ಮಾಡ್ಬೇಕು ಎಂದು ಪ್ರಶ್ನಿಸಿದ್ದಾರೆ.

ಇನ್ನು ಸ್ಟೀಲ್ ಬ್ರಿಡ್ಜ್ ವಿಚಾರದಲ್ಲಿ ಬಿಜೆಪಿ ವಿನಾಕಾರಣ ರಾಜಕೀಯ ಮಾಡುತ್ತಿದೆ. ಕೇಂದ್ರ ಸಚಿವ ಸದಾನಂದ ಗೌಡ ಅವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡುತ್ತಿದ್ದಾರೆ. ಸ್ಟೀಲ್ ಬ್ರಿಡ್ಜ್ ಸಂಬಂಧಿಸಿ ಗ್ಲೋಬಲ್ ಕಂಪೆನಿಯೊಂದನ್ನು ಕರೆದು ಟೆಂಡರ್ ನೀಡಿದ್ದು ಎಲ್ಲಾ ವಿಚಾರಗಳು ಪಾರದರ್ಶಕವಾಗಿ ನಡೆಯುತ್ತಿದೆ ಎಂದರು.

ವಿವಾದಿತ ಟಿಪ್ಪು ಜಯಂತಿ ಆಚರಣೆಯನ್ನು ಕಳೆದ ವರ್ಷದಂತೆ ಈ ಬಾರಿಯೂ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

No Comments

Leave A Comment