Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಪಾಕ್ ಪರ ಬೇಹುಗಾರಿಕೆ; ಸಮಾಜವಾದಿ ಪಕ್ಷದ ಸಂಸದನ ಆಪ್ತ ಅರೆಸ್ಟ್!

pakistan-spyನವದೆಹಲಿ:ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಳೆದ ರಾತ್ರಿ ಸಮಾಜವಾದಿ ಪಕ್ಷದ ಮುಖಂಡ ಮುನಾವ್ವರ್ ಸಲೀಂ ಆಪ್ತನೊಬ್ಬನನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಸಲೀಂ ಆಪ್ತ ಫಹಾತ್ ಎಂಬಾತನನ್ನು ದೆಹಲಿ ಕ್ರೈಂಬ್ರಾಂಚ್ ಪೊಲೀಸರು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.

ದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರಿ ಕಚೇರಿಯಲ್ಲಿನ ಸಿಬ್ಬಂದಿ ಮೆಹಮೂದ್ ಅಖ್ತರ್ ಎಂಬಾತನನ್ನು ಬುಧವಾರ ಪೊಲೀಸರು ಬಂಧಿಸಿದ್ದರು. ಅಲ್ಲದೇ ಪಾಕ್ ಪರ ಗೂಢಚಾರಿಕೆ ನಡೆಸಿದ ಆರೋಪದಲ್ಲಿ ಇಬ್ಬರು ಭಾರತೀಯರಾದ ಮೌಲಾನಾ ರಮ್ಜಾನ್ ಮತ್ತು ಸುಭಾಶ್ ಜಾಗೀರ್ ಎಂಬಾತನನ್ನು ಬಂಧಿಸಿದ್ದರು.

 

No Comments

Leave A Comment