Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಬೆಂಗಳೂರು; ಪಟಾಕಿ ಶಬ್ದದ ನಡುವೆಯೇ ಉದ್ಯಮಿಗೆ ಗುಂಡಿಕ್ಕಿ ಹತ್ಯೆ

shotಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಹಾಗೂ ಪಟಾಕಿ ಶಬ್ದದ ನಡುವೆಯೇ ನಗರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ಆಂಧ್ರಪ್ರದೇಶ ಮೂಲದ ಪರಚೂರಿ ಸುರೇಂದ್ರ ಎಂಬವರನ್ನು ಆರು ಸುತ್ತು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಪಲ್ಸರ್ ಬೈಕ್ ನಲ್ಲಿ ಹಿಂಬಾಲಿಸಿದ್ದ ಇಬ್ಬರು ದುಷ್ಕರ್ಮಿಗಳು ಉದ್ಯಮಿ ಸುರೇಂದ್ರ ಅವರು ಕಾರಿನಿಂದ ಇಳಿದು ಮನೆಯೊಳಗೆ ಬರುತ್ತಿದ್ದ ವೇಳೆ, ಪಟಾಕಿ ಶಬ್ದದ ಮಧ್ಯೆಯೇ ಆರು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಘಟನೆ ಬಗ್ಗೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಜಯ್ ನಗರ ಅಪಾರ್ಟ್ ಮೆಂಟ್ ಎದುರು ಈ ಘಟನೆ ನಡೆದಿದೆ. ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿಲ್ಲ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿದು ಬಂದಿದೆ.

ಸುರೇಂದ್ರ ಪರಚೂರಿ ಅವಿವಾಹಿತನಾಗಿದ್ದು, ಸುರೇಂದ್ರ ವಿರುದ್ಧ ಹಲವು ವಂಚನೆ ಪ್ರಕರಣಗಳು ದಾಖಲಾಗಿದ್ದವು ಎಂಬ ಬಗ್ಗೆ ಮಾಧ್ಯಮದ ವರದಿ ತಿಳಿಸಿದೆ. ಜಂಟಿಯಾಗಿ ವ್ಯವಹಾರ ನಡೆಸುತ್ತಿದದ ಕಪಿಲ್ ಸಾರಸ್ವತ್ ಎಂಬಾತ, ಸುರೇಂದ್ರನ ಹತ್ಯೆಗೆ ಪ್ರಯತ್ನಪಟ್ಟಿದ್ದ ಎಂದು ಹೇಳಲಾಗಿದೆ.

No Comments

Leave A Comment