Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಗುಂಡು ಹಾರಿಸಿ ಶಾಲೆಗೆ ನುಗ್ಗಲು ಯತ್ನಿಸಿದ ಉಗ್ರರು

terrorist-pakಲಾಹೋರ್: ಪೇಶಾವರ ಪೈಶಾಚಿಕ ಕೃತ್ಯದ ಬಳಿಕ ಮತ್ತೊಂದು ವಿಧ್ವಂಸಕ ಕೃತ್ಯವೊಂದು ಕ್ಷಣಾರ್ಧದಲ್ಲಿ ತಪ್ಪಿದಂತಾಗಿದೆ. ಶಸ್ತ್ರಾಸ್ತ್ರಗಳನ್ನು ಹೊತ್ತು ತಂದಿದ್ದ ಉಗ್ರ ಗುಂಪೊಂದು ಖಾಸಗಿ ಶಾಲೆಯೊಂದರ ಮೇಲೆ ದಾಳಿ ಮಾಡಲು ಯತ್ನಿಸಿರುವುದಾಗಿ ಸೋಮವಾರ ತಿಳಿದುಬಂದಿದೆ.

ಪಾಕಿಸ್ತಾನ ಪಂಜಾಬ್ ನ ಬಹವಾಲ್ನಗರದಲ್ಲಿರುವ ಖಾಸಗಿ ಶಾಲೆಯೊಂದರ ಬಳಿ ಬಂದಿರುವ ಇಬ್ಬರು ಉಗ್ರರು ಏಕಾಏಕಿ ಗುಂಡಿನ ದಾಳಿ ಮಾಡಲು ಆರಂಭಿಸಿದ್ದಾರೆ.

ಅಲ್ಲದೆ, ಶಾಲೆಯೊಳಗೆ ನುಗ್ಗಲು ಯತ್ನಿಸಿದಾಗ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಗಳು ತಡೆದಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಉಗ್ರರು ಕಾಲ್ಕಿತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಘಟನೆಯಲ್ಲಿ ಸಾವು-ನೋವುಗಳು ಸಂಭವಿಸಿಲ್ಲ, ಮಕ್ಕಳೆಲ್ಲರೂ ಸುರಕ್ಷಿತರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಕ್ಕಳನ್ನು ಮನೆಗಳಿಗೆ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದೆ.

No Comments

Leave A Comment