Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಉಡುಪಿ ಕನ್ನರ್ಪಾಡಿ: ರಸ್ತೆ ಅವಘಡ, 11 ಮಂದಿಗೆ ಗಾಯ

311016uk5ಉಡುಪಿ: ಕನ್ನರ್ಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅವಘಡದಲ್ಲಿ ಸುಮಾರು 11 ಮಂದಿ ಗಾಯಗೊಂಡಿದ್ದಾರೆ.

ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಮತ್ತು ಟ್ಯಾಂಕರ್‌ ನಡುವೆ ಢಿಕ್ಕಿ ಸಂಭವಿಸಿತು. ಬಸ್‌ ಉಡುಪಿಗೆ ತಿರುಗುವಾಗ ಟ್ಯಾಂಕರ್‌ ಹಿಂದಿನಿಂದ ಢಿಕ್ಕಿ ಹೊಡೆಯಿತು.

ಬಸ್‌ ಮಗುಚಿ ಬಿದ್ದು 11 ಮಂದಿ ಪ್ರಯಾಣಿಕರು ಗಾಯಗೊಂಡರು. ಏಳೆಂಟು ಮಂದಿ ಪ್ರಯಾಣಿಕರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಯಿತು. ಇವರಲ್ಲಿ ನಾಲ್ವರು ಒಳರೋಗಿಯಾಗಿ ದಾಖಲಾಗಿದ್ದಾರೆ, ಉಳಿದವರು ಹೊರರೋಗಿಯಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment