Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಟೈಮ್ಸ್ ನೌ ವಾಹಿನಿಯ ಪ್ರಧಾನ ಸಂಪಾದಕ ಹುದ್ದೆಗೆ ಅರ್ನಬ್ ಗೋಸ್ವಾಮಿ ರಾಜಿನಾಮೆ

arnab-goswamiನವದೆಹಲಿ: ಟೈಮ್ಸ್ ನೌ ವಾಹಿನಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

ಚರ್ಚಾ ಕಾರ್ಯಕ್ರಮಗಳ ಮೂಲಕ ಜನಪ್ರಿಯತೆ ಪಡೆದಿದ್ದ ಅರ್ನಬ್ ಗೋಸ್ವಾಮಿ ಅವರು ಟೈಮ್ಸ್ ನೌ ಉನ್ನತ ಮಟ್ಟದ ಸಂಪಾದಕೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅತ್ಯಂತ ಹೆಚ್ಚು ವೀಕ್ಷಿಸಲ್ಪಡುವ ನ್ಯೂಸ್ ಶೋ ಚರ್ಚಾ ಕಾರ್ಯಕ್ರಮವನ್ನು ಕೆಲ ಕಾಲ ಮುಂದುವರೆಸಲು ಅರ್ನಬ್ ಗೋಸ್ವಾಮಿ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅರ್ನಬ್ ತಮ್ಮದೇ ಆದ ಹೊಸ ಸಾಹಸಕ್ಕೆ ಕೈ ಹಾಕುವ ಸಾಧ್ಯತೆ ಹೆಚ್ಚಿದೆ.

No Comments

Leave A Comment