Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ರಾಜ್ಯ ಮಹಿಳಾ ಆಯೋಗದ ಸದಸ್ಯೆ ಕು.ಶ್ಯಾಮಲ ಭಂಡಾರಿ ರಾಜೀನಾಮೆ

shyamala_ph2ಉಡುಪಿ:ಹಿರಿಯ ನ್ಯಾಯವಾದಿ, ಮಹಿಳಾ ಪರ ಹೋರಾಟಗಾರ್ತಿ, ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾರ್ಯದರ್ಶಿ ಕುಮಾರಿ ಶ್ಯಾಮಲ ಭಂಡಾರಿಯವರು ರಾಜ್ಯ ಮಹಿಳಾ ಆಯೋಗದ ತನ್ನ ಸದಸ್ಯೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುತ್ತಾರೆ.

ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸರವರ ಅಧಿಕಾರಾವಧಿ ಇನ್ನೂ 8ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ಸಕಾರಣವಿಲ್ಲದೆ ಏಕಾ‌ಏಕಿ ರಾಜೀನಾಮೆ ಪಡೆದಿರುವುದನ್ನು ಪ್ರತಿಭಟಿಸಿ ಈ ಘಟನೆಯಿಂದ ಮನನೊಂದು ತಾನು ತನ್ನ ಆಯೋಗದ ಸದಸ್ಯೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಕು| ಭಂಡಾರಿಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

ಮಹಿಳೆಯರ ಮೇಲಾಗುವ ದೌರ್ಜನ್ಯ ತಡೆಗಟ್ಟುವುದು, ಅವರಿಗೆ ರಕ್ಷಣೆ ಒದಗಿಸುವುದು, ಸಮಾನತೆ ಕಲ್ಪಿಸುವುದು ಮತ್ತು ಅವರು ಗೌರವಯುತವಾಗಿ ಬದುಕುವ ಸನ್ನಿವೇಶ ನಿರ್ಮಿಸುವುದು ಮಹಿಳಾ ಆಯೋಗದ ಕಾರ್ಯವಾಗಿರುತ್ತದೆ. ಆದರೆ ಮಹಿಳಾ ಆಯೋಗದೊಳಗಿನ ಪ್ರಸಕ್ತ ಸನ್ನಿವೇಶ ನೋವು ತಂದಿದೆ ಎಂದು ಅವರು ವಿವರಿಸಿದ್ದಾರೆ.shyamala_ph_copy_copy

ಮಹಿಳಾ ಆಯೋಗದ ಸದಸ್ಯೆಯಾಗಿ ನೇಮಕಗೊಂಡ ನಂತರ ಅಂದರೆ ಕಳೆದ 2ವರ್ಷಗಳಿಂದ ಸಕ್ರೀಯವಾಗಿ ಆಯೋಗದ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ತಾನು ಅದೇ ಸಮಯದಲ್ಲಿ ಕಾಂಗ್ರೇಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿದ್ದರು ಕೂಡ ಆಯೋಗದ ಸದಸ್ಯರಾದವರು ರಾಜಕೀಯದಲ್ಲಿ ತೊಡಗಿಸಿಕೊಳ್ಳುವಂತಿಲ್ಲ ಎಂಬ ನಿಯಮಕ್ಕೆ ಅನುಗುಣವಾಗಿ ಸಕ್ರೀಯ ರಾಜಕಾರಣದಿಂದ ದೂರ ಉಳಿದಿರುವುದಾಗಿ ಹೇಳಿದ್ದಾರೆ.

No Comments

Leave A Comment