Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ; 3 ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ/Fire in Delhi’s Shahdara kills three

delhi-fireನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು  ತಿಳಿದುಬಂದಿದೆ.

ಪೂರ್ವ ದೆಹಲಿಯ ಶಾಹ್ದರಾ ಪ್ರದೇಶದಲ್ಲಿರುವ ಮೋಹನ್ ಪಾರ್ಕ್  ಸಮೀಪದ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಹಾಗು ಬೆಂಕಿಯ  ಕೆನ್ನಾಲಿಗೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಂತೆಯೇ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ.ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟ್ಟಡಕ್ಕೆ ಬೆಂಕಿ ಹೊತ್ತಿತ್ತಾದರೂ ನೋಡ ನೋಡುತ್ತಿದ್ದಂತೆಯೇ ಇಡೀ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಕೆಳಭಾಗದಲ್ಲಿದ್ದ 2 ಆಟೋಗಳಿಗೂ ಬೆಂಕಿ ತಗಲಿ  ಎರಡೂ ವಾಹನಗಳು ಸಂಪೂರ್ಣ ಭಸ್ಮವಾಗಿವೆ. ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಈ ವರೆದೂ  ಸುಮಾರು 10 ಮಂದಿ ಗಾಯಾಳುಗಳನ್ನು ರಕ್ಷಿಸಿದ್ದಾರೆ.

ಅಂತೆಯೇ ಬೆಂಕಿಯನ್ನು ತಹಬದಿಗೆ ತರುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದು, ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು  ತಿಳಿದುಬಂದಿದೆ. ಇನ್ನು ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ಅಗ್ನಿ ಅವಘಡಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ದೆಹಲಿಯಲ್ಲಿ ಸುಮಾರು 1500 ಕ್ಕೂ ಹೆಚ್ಚು ಅಗ್ನಿ ಶಾಮಕ ಸಿಬ್ಬಂದಿಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ.

ದೆಹಲಿಯ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳನ್ನಾಗಿ ವಿಭಾಗಿಸಿ ಈ 1500 ಸಿಬ್ಬಂದಿಗಳನ್ನು ಆಯಾಕಟ್ಟಿನ ಪ್ರದೇಶಗಳಲ್ಲಿ  ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

Three persons died and at least 10 were injured after a major fire broke out in one of the lanes of North East Delhi’s Shahdara in the early hours of Wednesday.

The cause of the fire is not yet known but it is suspected to be a case of short circuit. A senior police officer confirmed the deaths.

A fire department official said that the fire started around 5 a.m. in one of the houses of lane number 1 and spread rapidly.

The short circuit occurred when an e-rickshaw were being charged in the night, eyewitnesses purportedly told the police

No Comments

Leave A Comment