Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

RSS ಕಾರ್ಯಕರ್ತ ರುದ್ರೇಶ್ ಕೊಲೆಗೆ ಸ್ಕೆಚ್ ಹಾಕಿದ್ದ ಕಿಂಗ್ ಪಿನ್ ಬಂಧನ

rudraಬೆಂಗಳೂರು: ಆರ್ ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಕಿಂಗ್ ಪಿನ್ ನನ್ನು ಗುರುವಾರ ಬಂಧಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ(ಪಿಎಫ್ಐ) ಬೆಂಗಳೂರು ಜಿಲ್ಲಾಧ್ಯಕ್ಷ ಆಸೀಮ್ ಷರೀಫ್ ನನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.

ರುದ್ರೇಶ್ ಕೊಲೆಗೆ ಸ್ಕೆಚ್ ಹಾಕಿದ್ದ ಆಸೀಮ್ ಷರೀಫ್ ನನ್ನು ಇಂದು ಬೆಳಗ್ಗೆ ಬಂಧಿಸಲಾಗಿದ್ದು, ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿ ಆಸೀಂನನ್ನು ನ್ಯಾಯಾಧೀಶರು 14 ದಿನಗಳ ಕಾಲ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.

No Comments

Leave A Comment