Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಸ್ಟೀಲ್ ಫ್ಲೈಓವರ್ ನಿರ್ಮಾಣ ಸದ್ಯಕ್ಕಿಲ್ಲ: ಹೈಕೋರ್ಟ್ ಗೆ ಬಿಡಿಎ ವಾಗ್ದಾನ

highcourtಬೆಂಗಳೂರು: ತೀವ್ರ ವಿವಾದಕ್ಕೊಳಗಾಗಿರುವ ರಾಜ್ಯ ಸರ್ಕಾರದ ಬಹುನಿರೀಕ್ಷಿತ ಸ್ಟೀಲ್ ಫ್ಲೈಓವರ್ (ಉಕ್ಕಿನ ಸೇತುವೆ) ನಿರ್ಮಾಣ ಸದ್ಯಕ್ಕೆ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಗುರುವಾರ ಹೈಕೋರ್ಟ್ ಗೆ ಮುಚ್ಚಳಿಕೆ ಬರೆದುಕೊಟ್ಟಿದೆ.
ಸ್ಟೀಲ್ ಫ್ಲೈಓವರ್ ನಿರ್ಮಾಣಕ್ಕೆ ತಡೆ ಕೋರಿ ನಮ್ಮ ಬೆಂಗಳೂರು ಪ್ರತಿಷ್ಠಾನ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಬಿಡಿಎ ವಕೀಲರು ಸದ್ಯ ಸ್ಟೀಲ್ ಫ್ಲೈಓವರ್ ಯೋಜನೆ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ತಿಳಿಸಿದರು.
ಬಸವೇಶ್ವರ ವೃತ್ತದಿಂದ ಹೆಬ್ಬಾಳದ ಎಸ್ಟೀಮ್ ಮಾಲ್ ವರೆಗಿನ ಉದ್ದೇಶಿತ ಉಕ್ಕಿನ ಮೇಲ್ಸೇತುವೆ ನಿರ್ಮಾಣ ಸಾಧ್ಯತೆ ಬಾಧ್ಯತೆ, ಕಾನೂನಿನ ತೊಡಕು, ಸಂವಿಧಾನಿಕ ವಿಷಯಗಳನ್ನು ಪರಿಗಣಿಸಿ ಈ ಬಗ್ಗೆ ತೀರ್ಪು ನೀಡುವುದಾಗಿ ಹೈಕೋರ್ಟ್ ಹೇಳಿದೆ.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ)ದ ದಕ್ಷಿಣ ಪೀಠ ಈಗಾಗಲೇ ಸ್ಟೀಲ್ ಫ್ಲೈಓವರ್ ನಿರ್ಮಾಣಕ್ಕೆ ತಡೆ ನಾಲ್ಕು ವಾರಗಳ ಕಾಲ ಮಧ್ಯಂತರ ತಡೆ ನೀಡಿದ್ದು, ತಡೆಯಾಜ್ಞೆ ತೆರವುಗೊಳಿಸುವಂತೆ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.
ಸುಮಾರು 6.7 ಕಿಲೋ ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ1,761 ಕೋಟಿ ರು ಎಂದು ಅಂದಾಜು ವೆಚ್ಚ ನಿಗದಿ ಮಾಡಲಾಗಿದೆ.ಸ್ಟೀಲ್ ಫ್ಲೈಓವರ್ ಬೇಕು ಹಾಗೂ ಬೇಡ ಎಂದು ನಾಗರಿಕರು ನಡೆಸಿದ ಪ್ರತಿಭಟನೆಗಳು, ಅಹವಾಲುಗಳು, ತಜ್ಞರ ವರದಿಗಳನ್ನು ಕೂಡಾ ಹೈಕೋರ್ಟ್ ಪರಿಶೀಲಿಸುತ್ತಿದೆ.
No Comments

Leave A Comment