Log In
BREAKING NEWS >
ಮಾರ್ಚ್ 23 ರಿಂದ ಏಪ್ರಿಲ್ 6 ವರಗೆ SSLC ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾ ಬೆಳಿಗ್ಗೆ 9 ರಿಂದ 1:30 ರ ವರೆಗೆ ನಡೆಯಲಿದೆ........ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಬಲಿದಾನ್ ದಿವಸ್ ಪ್ರಯುಕ್ತ ರಕ್ತದಾನ ಶಿಬಿರ

02-wa0139ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಡುಪಿ ಇದರ ವತಿಯಿಂದ ಬಲಿದಾನ್ ದಿವಸ್ ಪ್ರಯುಕ್ತ ರಕ್ತದಾನ ಶಿಬಿರ ಮಣಿಪಾಲದ ಕೆ ಎಂ ಸಿ ಆಸ್ಪತ್ರೆಯಲ್ಲಿ ನಡೆಯಿತು. ಅಯೋಧ್ಯೆಯ ರಾಮ ಮಂದಿರಕ್ಕೋಸ್ಕರ ಬಲಿದಾನ ಮಾಡಿದಂತಹ ಕೊಠಾರಿ ಬಂಧುಗಳ ನೆನಪಿಗೋಸ್ಕರ ಈ ಶಿಬಿರ ನಡೆಯಿತು.

ಈ ಶಿಬಿರವನ್ನು ಹಂಗಾರಕಟ್ಟೆ ಬಾಳೆಕುಂದ್ರಿ ಮಠದ ಶ್ರೀನೃಸಿಂಹಾಶ್ರಮ ಸ್ವಾಮೀಜಿ ಇವರು ದೀಪ ಬೆಳಗಿಸಿ,ರಕ್ತದಾನ ಮಾಡುವ ಮೂಲಕ ಉದ್ಘಾಟಿಸಿದರು.

ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷರಾದ ಪಿ. ವಿಲಾಸ್ ನಾಯಕ್ , ಬಜರಂಗದಳದ ವಿಭಾಗ ಸಹಸಂಚಾಲಕ ಸುನೀಲ್. ಕೆ. ಆರ್, ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್, ವಿಶ್ವ ಹಿಂದೂ ಪರಿಷತ್‌ನ ಕಾರ್ಯದರ್ಶಿ ರತ್ನಾಕರ್ ಅಮೀನ್, ಸುಪ್ರಸಾದ್ ಶೆಟ್ಟಿ, ಗಿರೀಶ್ ಕುಂದಾಪುರ, ಸುಧೀರ್ ನಿಟ್ಟೆ ಮೊದಲಾದವರು ಉಪಸ್ಥಿತರಿದ್ದರು. ಈ ಶಿಬಿರದಲ್ಲಿ 110ಯುನಿಟ್ ರಕ್ತ ಕೊಡಲಾಯಿತು.

No Comments

Leave A Comment