Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಮೈಸೂರಿನಲ್ಲಿ RSS ಕಾರ್ಯಕರ್ತನ ಅನುಮಾನಾಸ್ಪದ ಸಾವು;ಹತ್ಯೆ ಶಂಕೆ

4ಮೈಸೂರು : ಪಿರಿಯಾರಪಟ್ಟಣ ತಾಲೂಕಿನ ಮಾಗಳಿಯಲ್ಲಿ ಬಿಜೆಪಿ ಯುವ ಮುಖಂಡ, ಆರ್‌ಎಸ್‌ಎಸ್‌ ಸಕ್ರಿಯ ಕಾರ್ಯಕರ್ತನೊಬ್ಬ ಶುಕ್ರವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ. ತಾಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಗಿದ್ದ ಮಾಗಳಿ ರವಿ (35)ಅವರ ಶವ ಹೊರವಲಯದ ತೋಪಿನಲ್ಲಿ ಅನುಮಾನಾಸ್ಪದ ವಾಗಿ ಪತ್ತೆಯಾಗಿದೆ.

ಶವ ಪರೀಕ್ಷೆಯ ವೇಳೆ ರವಿ ಅವರ ತಲೆ ಭಾಗಕ್ಕೆ ಗಂಭೀರವಾದ ಗಾಯಗೊಂಡಿದ್ದು ,ಕೊಲೆ ಶಂಕೆ ವ್ಯಕ್ತಪಡಿಸಲಾಗಿದೆ.

ಮೇಲ್ನೋಟಕ್ಕೆ ಅಪಘಾತ ಎಂದು ಹೇಳಲಾಗುತ್ತಿದ್ದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಪಿರಿಯಾರಪಟ್ಟಣ ಪೊಲೀಸರು ಕೂಲಂಕಷ ತನಿಖೆ ಮುಂದುವರಿಸಿದ್ದಾರೆ.

ಸ್ಥಳಕ್ಕೆ ಸಂಸದ ಪ್ರತಾಪ್‌ ಸಿಂಹ ಅವರು ಭೇಟಿ ನೀಡಿ ಪ್ರಕರಣ ಸೂಕ್ತ ತನಿಖೆ ನಡೆಸಲು ಆಗ್ರಹಿಸಿದ್ದಾರೆ.

ರವಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಕರೆಯಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಸ್ಕೂಟರ್‌ನಲ್ಲಿ ವಾಪಾಸಾಗುತ್ತಿದ್ದ ರು ಎಂದು ತಿಳಿದು ಬಂದಿದೆ.

ರವಿ ಸಂಘಪರಿವಾರದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಹಲವರ ವೈರ ಕಟ್ಟಿಕೊಂಡಿದ್ದರು ಎಂದು ಹೇಳಲಾಗಿದೆ.

No Comments

Leave A Comment