Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ತಮಿಳುನಾಡು: ಬಸ್ಸು ಕಂದಕಕ್ಕೆ ಬಿದ್ದು 30 ಪ್ರಯಾಣಿಕರಿಗೆ ಗಾಯ

bus-fell-tnಉದಕಮಂಡಲಂ: ಇಲ್ಲಿಂದ 40 ಕಿಲೋ ಮೀಟರ್ ದೂರದಲ್ಲಿ ಕನ್ನೇರಿ ಮಂದ್ ನೈ ಎಂಬಲ್ಲಿ ತಮಿಳು ನಾಡು ಸರ್ಕಾರಿ ಬಸ್ಸು 50 ಅಡಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸುಮಾರು 30 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.  

ಗಾಯಗೊಂಡವರನ್ನೆಲ್ಲ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ನಾಲ್ವರನ್ನು ಕೊಯಂಬತ್ತೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. 

ಬಸ್ಸಿನಲ್ಲಿದ್ದ ಪ್ರಯಾಣಿಕರು ಮದುವೆ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ತಮ್ಮ ಊರಿಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

No Comments

Leave A Comment