Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ದೆಹಲಿ:JNU ಕ್ಯಾಂಪಸ್ ನಲ್ಲಿ ಬುಲೆಟ್ಸ್, ಗನ್ ಪತ್ತೆ! ತೀವ್ರ ತನಿಖೆ

jnuನವದೆಹಲಿ: ಇತ್ತೀಚೆಗೆ ವಿವಾದದ ಕೇಂದ್ರ ಬಿಂದುವಾಗಿರುವ ನವದೆಹಲಿಯ ಜವಾಹರಲಾಲ್ ನೆಹರೂ ಯೂನಿರ್ವಸಿಟಿ ಕ್ಯಾಂಪಸ್ ನಲ್ಲಿ ಶಸ್ತ್ರಾಸ್ತ್ರಗಳಿದ್ದ ಬ್ಯಾಗ್ ಸೋಮವಾರ ನಸುಕಿನ ವೇಳೆ ಪತ್ತೆಯಾಗಿದ್ದು, ಮತ್ತೆ ವಿವಾದಕ್ಕೆ ಗುರಿಯಾಗಿದೆ.

ಜೆಎನ್ ಯು ವಿವಿಯ ಕ್ಯಾಂಪಸ್ ನಲ್ಲಿ ಪತ್ತೆಯಾಗಿರುವ ಬ್ಯಾಗ್ ನಲ್ಲಿ ಕಂಟ್ರಿಮೇಡ್ ಪಿಸ್ತೂಲ್, ಬುಲೆಟ್ಸ್ ದೊರಕಿದೆ.  ಮಧ್ಯರಾತ್ರಿ 2 ಗಂಟೆ ವೇಳೆಗೆ ಈ ಬ್ಯಾಗ್ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದು, ತನಿಖೆ ನಡೆಸಲಾಗುತ್ತಿದ್ದು, ಈ ಬ್ಯಾಗ್ ಅನ್ನು ಯಾರು ತಂದಿಟ್ಟಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ಹೇಳಿದ್ದಾರೆ.

No Comments

Leave A Comment