Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಶಬರಿಮಲೆ ಗರ್ಭಗುಡಿಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ;ಸುಪ್ರೀಂಗೆ ಕೇರಳ

sabrimalaನವದೆಹಲಿ:ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನದ ಗರ್ಭಗುಡಿಗೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಪ್ರವೇಶದ ಅವಕಾಶ ಕಲ್ಪಿಸಿಕೊಡಲು ಸಿದ್ಧ ಎಂದು ಕೇರಳ ಸರ್ಕಾರ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಅಭಿಪ್ರಾಯವ್ಯಕ್ತಪಡಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನೇತೃತ್ವದ ಎಲ್ ಡಿಎಫ್ ಸರ್ಕಾರ ಯೂಟರ್ನ್ ಹೊಡೆದಿದ್ದು, ಶಬರಿಮಲೆ ದೇಗುಲದ ಗರ್ಭಗುಡಿಗೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ತಮ್ಮ ಸರ್ಕಾರ ಸಿದ್ಧವಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದೆ.

ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರ ಮೇಲಿನ ನಿಷೇಧವನ್ನು ವಾಪಸ್ ಪಡೆಯಲು ಹಿಂದಿನ ಉಮ್ಮನ್ ಚಾಂಡಿ ನೇತೃತ್ವದ ಕಾಂಗ್ರೆಸ್ ಮೈತ್ರಿಕೂಟ ವಿರೋಧ ವ್ಯಕ್ತಪಡಿಸಿತ್ತು.

ಭಕ್ತರ ನಂಬಿಕೆ ಮತ್ತು ಸಂಪ್ರದಾಯಗಳನ್ನು ನ್ಯಾಯಾಂಗ ಪ್ರಕ್ರಿಯೆ ಮೂಲಕ ಬದಲಾಯಿಸಲು ಸಾಧ್ಯವಿಲ್ಲ ಎಂದು ಅಂದಿನ ಚಾಂಡಿ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿತ್ತು. ಈ ಬಗ್ಗೆ ದೇಗುಲದ ಪುರೋಹಿತರ ಅಭಿಪ್ರಾಯವೇ ಅಂತಿಮ ಎಂದು ಪ್ರಮಾಣಪತ್ರದಲ್ಲಿ ಹೇಳಿತ್ತು.

ಶಬರಿಮಲೆ ದೇಗುಲ ಪ್ರವೇಶಕ್ಕೆ 10 ರಿಂದ 50 ವಯೋಮಿತಿಯೊಳಗಿನ ಮಹಿಳೆಯರ ಮೇಲೆ ನಿರ್ಬಂಧ ವಿಧಿಸಲಾಗಿತ್ತು.

ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಮಹಿಳೆಯರ ಮೇಲಿನ ನಿಷೇಧ ದೇಗುಲದ ಸಂಪ್ರದಾಯ ಹಾಗೂ ಪದ್ಧತಿಯ ಭಾಗವಾಗಿದ್ದು, ಅದು ಮುಂದುವರೆಯಬೇಕು ಎಂದು ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ಅಭಿಪ್ರಾಯವ್ಯಕ್ತಪಡಿಸಿತ್ತು.

No Comments

Leave A Comment