Log In
BREAKING NEWS >
ಮಾರ್ಚ್ 23 ರಿಂದ ಏಪ್ರಿಲ್ 6 ವರಗೆ SSLC ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾ ಬೆಳಿಗ್ಗೆ 9 ರಿಂದ 1:30 ರ ವರೆಗೆ ನಡೆಯಲಿದೆ........ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ನಿಟ್ಟೂರು ಪ್ರೌಢಶಾಲೆಯಲ್ಲಿ ನೈತಿಕ ಶಿಕ್ಷಣ ಪುಸ್ತಕ ವಿತರಣಾ ಮತ್ತು ಉಪನ್ಯಾಸ ಕಾರ್ಯಕ್ರಮ

dsc_3200ಉಡುಪಿ : ಲಯನ್ಸ್ ಮತ್ತು ಲಯನೆಸ್ ಕ್ಲಬ್ ಮಲ್ಪೆ ಹಾಗೂ ನಿಟ್ಟೂರು ಪ್ರೌಢಶಾಲೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ನೈತಿಕ ಶಿಕ್ಷಣದ ಕುರಿತು ಉಪನ್ಯಾಸ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ ಜರಗಿತು. ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಪಿ. ವಾಸುದೇವ ರಾವ್ ವಿದ್ಯಾರ್ಥಿಗಳನ್ನು ಕುರಿತು ನೈತಿಕ ಶಿಕ್ಷಣದ ಬಗ್ಗೆ ಉಪನ್ಯಾಸ ನೀಡಿದರು.

ಅತಿಥಿಗಳಾದ ಲ| ವಿಲಿಯಂ ಎ. ಫುಟಾರ್ಡೊ, ಲ| ಕೆ. ನಾಗರಾಜ ಗೌಡ, ಲ| ದಿನಕರ ಭಟ್ ಭಾವೆ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಪ್ರವರ್ತಕರಾದ ಲ| ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮ ಉದ್ದೇಶದ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಆಧಾರಿತ ಪುಸ್ತಕಗಳನ್ನು ವಿತರಿಸಲಾಯಿತು.

ತಲ್ಲೂರು ಶಿವರಾಮ ಶೆಟ್ಟಿ ದಂಪತಿಗಳನ್ನು ಮತ್ತು ಪಿ. ವಾಸುದೇವ ರಾವ್ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ವಿದ್ಯಾರ್ಥಿಗಳ ನೈತಿಕತೆಯ ಬೆಳವಣಿಗೆಯಲ್ಲಿ ನೈತಿಕತೆ ಆಧಾರಿತ ಪುಸ್ತಕಗಳ ಓದು ಅತೀ ಅಗತ್ಯ ಈ ನಿಟ್ಟಿನಲ್ಲಿ ಕಾರ್ಯಕ್ರಮ ಶ್ಲಾಘನೀಯ ಎಂದರು.

ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಎಸ್.ವಿ. ಭಟ್, ಲಯನ್ಸ್ ಸಿದ್ದರಾಜು, ಲಯನೆಸ್ ಜಯಲಕ್ಷ್ಮೀ ನಾಗಪ್ಪ ಅಮೀನ್, ಲಯನೆಸ್ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಲಯನ್ಸ್ ಸಿದ್ಧರಾಜು ಶಾಲೆಯ ಚಟುವಟಿಕೆಗಳನ್ನು ಮೆಚ್ಚಿ ೧೦ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಹತ್ತು ಸಾವಿರ ರೂಪಾಯಿ ನಗದು ಬಹುಮಾನ ಘೋಷಿಸಿದರು. ಲ| ಸುನೀಲ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಸ್ವಾಗತಿಸಿದರು. ಶಿಕ್ಷಕ ದೇವದಾಸ್ ಶೆಟ್ಟಿ ನಿರೂಪಿಸಿದರು. ಲಯನೆಸ್ ವೀಣಾ ವಿ. ಕಾಮತ್ ವಂದನಾರ್ಪಣೆ ಗೈದರು.

No Comments

Leave A Comment