Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ 2016: 138 ಮತಗಳಿಂದ ಟ್ರಂಪ್ ಮುನ್ನಡೆ

trump-hillaryವಾಷಿಂಗ್ಟನ್: ಅಮೆರಿಕ ಅಧ್ಯಕ್ಷರ ಆಯ್ಕೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆರಂಭಿಕ ಸುತ್ತಿನಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು 138 ಮತಗಳಿಂದ ಮುನ್ನಡೆ ಸಾಧಿಸಿರುವುದಾಗಿ ಬುಧವಾರ ವರದಿಗಳು ತಿಳಿಸಿವೆ.

ಅಮೆರಿಕದ ಅಧ್ಯಕ್ಷರಾಗಲು 270 ಪ್ರತಿನಿಧಿಗಳ ಬೆಂಬಲ ಬೇಕು. ಮೂಲಗಳ ಪ್ರಕಾರ ಈ ವರೆಗೂ ರಿಪಬ್ಲಿಕನ್ ಪಕ್ಷದ ಅಭ್ಯರ್ಧಿ ಡೊನಾಲ್ಡ್ ಟ್ರಂಪ್ ಅವಪು 138 ಮತಗಳನ್ನು ಪಡೆದು ಮುನ್ನಡೆ ಕಾಯ್ದುಕೊಂಡಿದ್ದರೆ, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ಅವರು 104 ಮತಗಳನ್ನು ಪಡೆದು ಹಿನ್ನಡೆ ಅನುಭವಿಸುತ್ತಿದ್ದಾರೆಂದು ತಿಳಿದುಬಂದಿದೆ.ಇಡೀ ವಿಶ್ವದ ಗಮನ ಸೆಳೆದಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತದಾನ ಪ್ರಕ್ರಿಯೆ ನಿನ್ನೆಯಷ್ಟೇ ಪೂರ್ಣಗೊಂಡಿತ್ತು.

ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ಹಾಗೂ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ತಮ್ಮ ತಮ್ಮ ಮತಗಳನ್ನು ಚಲಾಯಿಸಿದ್ದರು.

ಅಮೆರಿಕದ ಸುಮಾರು 20 ಕೋಟಿ ಮತದಾರರು ಮತ ಚಲಾಯಿಸಿದ್ದರು. ಇದೀಗ ಮತ ಎಣಿಕೆಯ ಪ್ರಕ್ರಿಯೆ ಆರಂಭಗೊಂಡಿದ್ದು, ಯಾರು ಅಮೆರಿಕ ರಾಷ್ಟ್ರದ ಅಧ್ಯಕ್ಷ ಸ್ಥಾನವನ್ನು ಏರಲಿದ್ದಾರೆಂಬ ಕುತೂಹಲಗಳು ಎಲ್ಲೆಡೆ ಮೂಡತೊಡಗಿವೆ.

No Comments

Leave A Comment