Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಅಡ್ಡಿ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

tippppppuಮಂಗಳೂರು: ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದ ಜಿಲ್ಲಾ ಪಂಚಾಯತ್‌ ಸಭಾಂಗಣಕ್ಕೆ ನುಗ್ಗಲು ಯತ್ನಿಸಿದ ವಿಧಾನ ಪರಿಷತ್‌ ಸದಸ್ಯ ಗಣೇಶ್‌ ಕಾರ್ಣಿಕ್‌, ಸಂಸದ ನಳೀನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವು ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾರ್ಯಕ್ರಮದ ವೇಳೆ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಸದಸ್ಯರು ಕಪ್ಪು ಬಾವುಟ ಪ್ರದರ್ಶಿಸಿದರು. ಸಮಿತಿಯ ಸದಸ್ಯರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಸುಮಾರು 200 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪೊಲೀಸ್‌ ಭದ್ರತೆಯಲ್ಲಿ ಕಾರ್ಯಕ್ರಮ ಮುಂದುವರಿದಿದೆ.

ಮಡಿಕೇರಿಯಲ್ಲಿ ಪ್ರತಿಭಟನೆ…
ಟಿಪ್ಪು ಜಯಂತಿ ಕಾರ್ಯಕ್ರಮ ವಿರೋಧಿಸಿ ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

No Comments

Leave A Comment