Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಅರೆನಗ್ನ ಚಿತ್ರ ವೀಕ್ಷಣೆ: ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಬಿಜೆಪಿ ಆಗ್ರಹ

tanveer-saitರಾಯಚೂರು: ಟಿಪ್ಪು ಜಯಂತಿ ಆಚರಣೆ ವೇಳೆ ವೇದಿಕೆ ಮೇಲೆ ಆಸೀನರಾಗಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಮೊಬೈಲ್ ನಲ್ಲಿ ಅರೆ ನಗ್ನ ಚಿತ್ರಗಳನ್ನು ವಿಕ್ಷೀಸಿ ಇದೀಗ ವಿವಾದಕ್ಕೆ ಸಿಲುಕಿದ್ದಾರೆ.

ರಂಗಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವರು ತಮ್ಮ ಮೊಬೈಲ್ ನಲ್ಲಿ ಅರೆ ನಗ್ನ ಚಿತ್ರ ವೀಕ್ಷಿಸುತ್ತಿದ್ದು ಈ ದೃಶ್ಯಾವಳಿ ಟಿವಿ9 ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಳಿಕ ಕ್ಯಾಮೆರಾ ಕಂಡೊಡನೇ ಸಚಿವರು ಮೊಬೈಲ್ ಸ್ಕ್ರೀನ್ ಕ್ಲೊಸ್ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡರು ಕಾಂಗ್ರೆಸ್ ಸಚಿವರ ಕೀಳು ವರ್ತನೆ ವಿರುದ್ಧ ಹರಿಹಾಯ್ದಿದ್ದಾರೆ. ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ವಿರೋಧದ ನಡುವೆಯೂ ನಡೆದ ಟಿಪ್ಪು ಜಯಂತಿ ಆಚರಣೆ ವೇಳೆ ಸಚಿವರ ನಡವಳಿಕೆ ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದ್ದು, ಸಚಿವನಾಗಿ ಸಾರ್ವಜನಿಕವಾಗಿ ಬೇವಾಬ್ದಾರಿ ವರ್ತನೆ ತೋರಿದ ತನ್ವೀರ್ ಸೇಠ್ ಅವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

No Comments

Leave A Comment