Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಜರ್ಮನ್ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ; 2 ಸಾವು, 100 ಅಧಿಕ ಮಂದಿಗೆ ಗಾಯ

german-consulateಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಮತ್ತೆ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆದಿದ್ದು, ಜರ್ಮನ್ ರಾಯಭಾರ ಕಚೇರಿ ಮೇಲೆ ನಡೆಸಿದ ಆತ್ಮಹತ್ಯಾ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಕಾಬೂಲ್ ನ ಮಝರ್‌-ಇ-ಷರೀಫ್ ನಗರದಲ್ಲಿರುವ ಜರ್ಮನ್‌ ರಾಯಭಾರ ಕಚೇರಿಯ ಕಾಂಪೌಂಡ್ ಗೆ ತಾಲಿಬಾನ್ ಉಗ್ರನೋರ್ವ ಗುರುವಾರ ತಡರಾತ್ರಿ ಕಾರ್‌ ಬಾಂಬ್‌ ಸ್ಫೋಟಿಸಿದ್ದಾನೆ.ಪರಿಣಾಮ ಇಬ್ಬರು ಸ್ಥಳದಲ್ಲೇ  ಸಾವನ್ನಪ್ಪಿದ್ದು, 100 ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ತಾಲಿಬಾನ್ ಉಗ್ರರು ಕಾರಿನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ತುಂಬಿಸಿ ಜರ್ಮನ್ ರಾಯಭಾರ ಕಚೇರಿಯೊಳಗೆ ನುಗ್ಗಿಸಿದ್ದಾರೆ ಎಂದು  ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ರಭಸಕ್ಕೆ ಸಮೀಪದ ಬಿಲ್ಡಿಂಗ್ ಗಳಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಆದರೆ ಉಗ್ರರ ದಾಳಿಯಲ್ಲಿ ಜರ್ಮನ್ ರಾಯಭಾರ ಕಚೇರಿಯ ಅಧಿಕಾರಿಗಳು ಪಾರಾಗಿದ್ದು, ಅಧಿಕಾರಿಗಳು ಯಾವುದೇ ರೀತಿಯಲ್ಲೂ  ಗಾಯಗೊಂಡಿಲ್ಲ ಎಂದು ಜರ್ಮನ್ ವಿದೇಶಾಂಗ ಇಲಾಖೆ ತಿಳಿಸಿದೆ.

ಈ ಹಿಂದೆ ಕುಂಡೂಜ್‌ನಲ್ಲಿ ಅಮೆರಿಕ ನೇತೃತ್ವದ ಮಿತ್ರಪಡೆಗಳು ವಾಯುದಾಳಿ ನಡೆಸಿ ಹಲವು ಉಗ್ರರನ್ನು ಕೊಂದು ಹಾಕಿತ್ತು. ಈ ವೇಳೆ ಸುಮಾರು 32  ನಾಗರಿಕರು ಕೂಡ ಸಾವಿಗೀಡಾಗಿದ್ದರು. ಇದಕ್ಕೆ ಪ್ರತಿಕಾರವಾಗಿ ಈ ದಾಳಿ ನಡೆಸಿದ್ದೇವೆ ಎಂದು ತಾಲಿಬಾನ್‌ ಹೆಳಿಕೊಂಡಿದೆ.

No Comments

Leave A Comment