Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಬಿಹಾರ: ಗುಂಡು ಹಾರಿಸಿ ಪತ್ರಕರ್ತನನ್ನು ಹತ್ಯೆ ಮಾಡಿದ ದುಷ್ಕರ್ಮಿಗಳು

shootoutರೋಹ್ಟಸ್: ಹಿಂದಿ ಸುದ್ದಿ ಪತ್ರಿಕೆಯ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯೊಂದು ಬಿಹಾರ ರಾಜ್ಯದ ರೋಹ್ಟಸ್ ಜಿಲ್ಲೆಯ ಸಸಾರಾಂನಲ್ಲಿ ಶನಿವಾರ ನಡೆದಿದೆ.

ದೈನಿಕ್ ಭಾಸ್ಕರ್ ಪತ್ರಿಯೆ ಪತ್ರಕರ್ತ ಧರ್ಮೇಂದ್ರ ಸಿಂಗ್ ಎಂಬುವವರನ್ನು ಹತ್ಯೆ ಮಾಡಲಾಗಿದೆ. ಇಂದು ಬೆಳಿಗ್ಗೆ ಮನೆಯ ಪಕ್ಕದಲ್ಲಿಯೇ ಇದ್ದ ಟೀ ಅಂಗಡಿ ಬಳಿ ಧರ್ಮೇಂದ್ರ ಸಿಂಗ್ ಅವರು ನಿಂತಿದ್ದ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿರುವ ಮೂವರು ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಮ್ರಾ ಲೇಕ್ ಬಳಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.ಗುಂಡಿನ ದಾಳಿ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಧರ್ಮೇಂದ್ರ ಸಿಂಗ್ ಅವರನ್ನು ಸ್ಥಳೀಯರು ಸಸಾರಾಂ ಸರ್ದಾರ್ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ನಂತರ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ವಾರಣಾಸಿಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಈ ವೇಳೆ ವಾರಣಾಸಿಗೆ ಕರೆದೊಯ್ಯುತ್ತಿರುವಾಗ ಮಾರ್ಗದ ಮಧ್ಯೆಯೇ ಧರ್ಮೇಂದ್ರ ಅವರು ಕೊನೆಯುಸಿರೆಳೆದಿದ್ದಾರೆಂದು ಹೇಳಲಾಗುತ್ತಿದೆ.

No Comments

Leave A Comment