Log In
BREAKING NEWS >
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ; ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ 3 ದಿನ ಶೋಕಾಚರಣೆ........20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಸಾವಿನ ಸಂಖ್ಯೆ 62ಕ್ಕೆ ಏರಿಕೆ

pak-bomb-blastಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ್‌ ಪ್ರಾಂತ್ಯದ ಷಾ ನೂರಾನಿ ಯಾತ್ರಾಸ್ಥಳದಲ್ಲಿ ನಡೆಸಲಾಗಿದ್ದ ಆತ್ಮಾಹುತಿ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ.
ಶುಕ್ರವಾರ ಹಿನ್ನೆಲೆಯಲ್ಲಿ ನೂರಾನಿ ಯಾತ್ರಾಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಿದ್ದರು. ಯಾತ್ರಿಗಳನ್ನು ಗುರಿಯಾಸಿಕೊಂಡಿದ್ದ ಉಗ್ರರು ಈ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿ ತಮ್ಮ ಕ್ರೂರ ವರ್ತನೆಯನ್ನು ಪ್ರದರ್ಶಿಸಿದ್ದಾರೆ.
ಯಾತ್ರಿಗಳು ಸಾಂಪ್ರಾದಾಯಿಕ ನೃತ್ಯ ಮಾಡುವುದರಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಬಾಂಬ್ ದಾಳಿ ನಡೆಸಲಾಗಿದೆ. ಉಗ್ರರು ಆತ್ಮಾಹುತಿ ದಾಳಿ ಮಾಡಿದ್ದರೇ ಅಥವಾ ಬಾಂಬ್ ನ್ನು ಇಟ್ಟು ಸ್ಫೋಟಿಸಿದ್ದಾರೆಯೇ ಎಂಬುದು ಈ ವರೆಗೂ ಸ್ಪಷ್ಟವಾಗಿಲ್ಲ ಎಂದು ಉಪ ಪೊಲೀಸ್ ಅಧೀಕ್ಷಕ ಜಿಯಾ ಮಂಡೋಖೇಲ್ ಅವರು ಹೇಳಿದ್ದಾರೆ.
ಬಾಂಬ್ ದಾಳಿಯಿಂದಾಗಿ ನೂರಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ. ಇಸಿಸ್ ಉಗ್ರ ಸಂಘಟನೆ ದಾಳಿ ಹೊಣೆಯನ್ನು ಹೊತ್ತುಕೊಂಡಿದೆ ಎಂದು ತಿಳಿದುಬಂದಿದೆ.
No Comments

Leave A Comment