Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ವಿನಿಮಯಕ್ಕೆ ತರಲಾಗುತ್ತಿದ್ದ ಅಕ್ರಮವಾಗಿ ಸಾಗಿಸುತ್ತಿದ್ದ 60 ಲಕ್ಷ ನಗದು ವಶ: ಇಬ್ಬರ ಬಂಧನ

35353ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಹೊಸಪೇಟೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 60 ಲಕ್ಷ ನಗದನ್ನು ಸೋಮವಾರ ವಶಕ್ಕೆ ಪಡೆದಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಕೇಶ್ವಾಪುರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಹುಬ್ಬಳ್ಳಿಯ ಕೇಶ್ವಾಪುರದ ಹರಿಹಂತ ನಗರದಿಂದ ಹೊಸಪೇಟೆಗೆ ಹಣ ಸಾಗಿಸುತ್ತಿದ್ದ ಸ್ಕಾರ್ಪಿಯೊ(ಕೆ.ಎ. 35 ಎಂ 8395) ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ‌‌ ಪ್ರವೀಣ್ ಜೈನ್, ಶ್ರೀನಿವಾಸ ಮೂತಿ೯ ಎಂಬುವರನ್ನು ಬಂಧಿಸಲಾಗಿದೆ.

ಹೊಸಪೇಟೆಯಿಂದ ಹುಬ್ಬಳ್ಳಿ ಸಂಬಂಧಿ ಮನೆಗೆ ಹಣ ವಿನಿಮಯಕ್ಕೆ ತರಲಾಗಿತ್ತು. ಹಣ ವಿನಿಮಯ ಸಾದ್ಯವಾಗದಕ್ಕೆ ಮರಳಿ ಹೊಸಪೇಟೆಗೆ ತೆಗೆದುಕೊಂಡು ಹೋಗುವಾಗ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಾಹನ ತಪಾಸಣೆ ಮಾಡಿದಾಗ ಹಣ ಸಾಗಾಟ ಬಯಲಾಗಿದೆ. 500 ಹಾಗೂ 1,000 ಮುಖಬೆಲೆಯ ನೋಟುಗಳನ್ನು ಸಾಗಿಸಲಾಗುತ್ತಿತ್ತು.

No Comments

Leave A Comment