Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಮಾನನಷ್ಟ ಮೊಕದ್ದಮೆ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು

rahul-gandhiಮುಂಬೈ: ಆರ್’ಎಸ್ಎಸ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯವು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬುಧವಾರ ಜಾಮೀನು ಮಂಜೂರು ಮಾಡಿದೆ.

2014ರ ಲೋಕಸಭಾ ಚುನಾವಣಾ ಪ್ರಚಾರವೊಂದರಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಹಾತ್ಮ ಗಾಂಧಿಯವರನ್ನು ಕೊಂದಿದ್ದು ಆರ್’ಎಸ್ಎಸ್ ಎಂದು ಆರೋಪಿಸಿದ್ದರು.

ಈ ಕುರಿತು ಆರ್’ಎಸ್ಎಸ್ ಕಾರ್ಯಕರ್ತರೊಬ್ಬರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ದಾಖಲು ಮಾಡಿದ್ದರು.ಪ್ರಕರಣ ಸಂಬಂಧ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಯವರು ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ.

ಈ ಬಗ್ಗೆ ಯಾವುದೇ ವಿಚಾರಣೆ ಎದುರಿಸಲು ನಾನು ಸಿದ್ಧನಿದ್ದೇನೆಂದು ಹೇಳಿದ್ದರು. ಇದರಂತೆ ಇಂದು ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದರು.ವಿಚಾರಣೆ ನಡೆಸಿದ ನ್ಯಾಯಾಲಯವು ವೈಯಕ್ತಿಕ ಬಾಂಡ್ ಆಧಾರದ ಮೇಲೆ ರಾಹುಲ್ ಗಾಂಧಿಯವರಿಗೆ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಜನವರಿ 28ಕ್ಕೆ ಮುಂದೂಡಿದೆ.

No Comments

Leave A Comment