Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಕಿಡ್ನಿ ವೈಫಲ್ಯದಿಂದ ಆಸ್ಪತ್ರೆ ಸೇರಿದ್ದೇನೆ, ಡಯಾಲಿಸಿಸ್ ನಡೆಯುತ್ತಿದೆ: ಸುಷ್ಮಾ ಟ್ವೀಟ್

sushma-swaraj

ನವದೆಹಲಿ: ತಾವು ಕಿಡ್ನಿ ವೈಫಲ್ಯದಿಂದ ಆಸ್ಪತ್ರೆ ಸೇರಿದ್ದು, ಪ್ರಸ್ತುತ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಬುಧವಾರ ಹೇಳಿದ್ದಾರೆ.ಟ್ವಿಟರ್ ನಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಶೀಘ್ರದಲ್ಲೇ ತಾವು ಕಿಡ್ನಿ ಟ್ರಾನ್ಸ್ ಪ್ಲಾಂಟೇಷನ್ ಶಸ್ತ್ರಚಿಕಿತ್ಸೆ ಒಳಗಾಗುತ್ತಿದ್ದೇನೆ. ಶ್ರೀಕೃಷ್ಣ ಭಗವಂತ ಆಶೀರ್ವಾದ ಮಾಡುತ್ತೇನೆ  ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ಕಿಡ್ನಿ ಸಮಸ್ಯೆಯಿಂದಾಗಿ ಅನಾರೋಗ್ಯ ಪೀಡಿತರಾಗಿದ್ದ ಸುಷ್ಮಾ ಸ್ವರಾಜ್ ಅವರು ಮಂಗಳವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.ಸುಷ್ಮಾ ಸ್ವರಾಜ್ ಅವರ ಆರೋಗ್ಯ ಪರಿಸ್ಥಿತಿ ಕುರಿತಂತೆ ಮಾಹಿತಿ ನೀಡಿರುವ ದೆಹಲಿ ಏಮ್ಸ್ ಆಸ್ಪತ್ರೆ ವೈದ್ಯರು, ಸುಷ್ಮಾ ಅವರಿಗೆ ಸಕ್ಕರೆ ಖಾಯಿಲೆ ಇತರೆ ಆರೋಗ್ಯ ಸಮಸ್ಯೆಗಳಿದ್ದು ಈ ಬಗ್ಗೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು  ಹೇಳಿದ್ದಾರೆ. ಈ ಹಿಂದೆಯೂ ಇದೇ ಕಿಡ್ನಿ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಸುಷ್ಮಾ ಸ್ವರಾದ್ ಅವರು, 21 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು.ಇನ್ನು ಸುಷ್ಮಾಸ್ವರಾಜ್ ಅವರ ಶೀಘ್ರ ಚೇತರಿಕೆಗೆ ಪ್ರಮುಖ ಗಣ್ಯರು ರಾಜಕೀಯ ಮುಖಂಡರು ಆಶಿಸಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟರ್ ನಲ್ಲಿ ಸುಷ್ಮಾ ಸ್ವರಾಜ್ ಅವರ ಪರವಾಗಿ ಪ್ರಾರ್ಥನೆ ಸಲ್ಲಿಸುತ್ತೇನೆ.  ಅವರು ಶೀಘ್ರ ಗುಣಮುಖರಾಗಿ ಬರಲಿ ಎಂದು ಹೇಳಿದ್ದಾರೆ. ಅಂತೆಯೇ ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಆಬ್ದುಲ್ಲಾ ಅವರು ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಸುಷ್ಮಾ ಅವರ ಅನಾರೋಗ್ಯ ವಿಚಾರ ಕೇಳಿ ತುಂಬಾ  ನೋವಾಯಿತು. ನನ್ನ ತಂದೆಗೂ ಕೂಡ ಇದೇ ಸಮಸ್ಯೆ ಇತ್ತು. ಹೀಗಾಗಿ ಅವರ ಕುಟುಂಬಸ್ಥರ ನೋವನ್ನು ನಾನು ಗ್ರಹಿಸಬಲ್ಲೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

No Comments

Leave A Comment