Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

Demonetisation effect: ಬಿಡುವಿಲ್ಲದ ಕೆಲಸ, SBI ಮ್ಯಾನೇಜರ್ ಸಾವು

bank-manager-story61ಆಂಧ್ರಪ್ರದೇಶ:ಕೇಂದ್ರ ಸರ್ಕಾರ 500, 1000 ರೂಪಾಯಿ ಮುಖಬೆಲೆಯ ನೋಟುಗಳ ರದ್ದು ಮಾಡಿ 12 ದಿನ ಕಳೆಯುತ್ತಿದ್ದರೆ ಬ್ಯಾಂಕುಗಳಲ್ಲಿ ನೋಟು ಬದಲಾಯಿಸುವ ಪ್ರಯತ್ನದಲ್ಲಿರುವವರ ಸಾವಿನ ಸಂಖ್ಯೆ ಏರುತ್ತಲೇ ಇದೆ. ಮತ್ತೊಂದೆಡೆ ಬಿಡುವಿಲ್ಲದೆ ಕಾರ್ಯನಿರ್ವಹಿಸಿದ ಬ್ಯಾಂಕ್ ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರ್ ಎಸ್ ಬಿಐ ಬ್ಯಾಂಕ್ ನಲ್ಲಿ ನಡೆದಿದೆ.

ನೆಲ್ಲೂರ್ ಎಸ್ ಬಿಐ ಶಾಖೆಯ ಡೆಪ್ಯುಟಿ ಮ್ಯಾನೇಜರ್ ಎಸ್.ಕೆ.ಷರೀಫ್(46) ಕಾರ್ಯನಿರ್ವಹಿಸುತ್ತಿದ್ದಾಗಲೇ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟೊತ್ತಿಗಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು.

ವಿಪರೀತವಾದ ಕೆಲಸ ಮತ್ತು ಒತ್ತಡದಿಂದಾಗಿ ಷರೀಫ್ ಸಾವನ್ನಪ್ಪಿದ್ದಾರೆಂದು ತಂದೆ ಜಹೀರ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ನೋಟು ನಿಷೇಧಗೊಂಡ ನವೆಂಬರ್ 9ರಿಂದ ಎಸ್.ಕೆ.ಷರೀಫ್ ಬ್ಯಾಂಕ್ ನಲ್ಲಿ ಬೆಳಗ್ಗೆ 8ರಿಂದ ರಾತ್ರಿ 10ಗಂಟೆವರೆಗೆ ಕಾರ್ಯನಿರ್ವಹಿಸುತ್ತಿದ್ದರು. ಷರೀಫ್ ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ. ಇತ್ತೀಚೆಗಷ್ಟೇ ಹರ್ಯಾಣ ಬ್ಯಾಂಕ್ ಮ್ಯಾನೇಜರ್ ಕೂಡಾ ನಿರಂತರ ಮೂರು ದಿನಗಳ ಕಾಲ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದರು. ಹರ್ಯಾಣದ ರೋಹ್ಟಕ್ ಕೋ ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ರಾಜೇಶ್ ಕುಮಾರ್ (56) ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದರು.

No Comments

Leave A Comment