Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಕಾನ್ಪುರ ರೈಲು ದುರಂತ: ಸಾವಿನ ಸಂಖ್ಯೆ 142ಕ್ಕೆ ಏರಿಕೆ, 169 ಗಾಯಾಳುಗಳ ಪಟ್ಟಿ ಬಿಡುಗಡೆ!

kanpur-tಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಬಳಿ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಭಾನುವಾರ ಸಂಭವಿಸಿದ ಭೀಕರು ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಬರೊಬ್ಬರಿ 142ಕ್ಕೆ ಏರಿಕೆಯಾಗಿದ್ದು, ಈ ಪೈಕಿ 110 ಶವಗಳ  ಗುರುತು ಪತ್ತೆ ಮಾಡಲಾಗಿದೆ ಎಂದು ರೈಲ್ವೇ ಇಲಾಖೆ ಮೂಲಗಳು ತಿಳಿಸಿವೆ.

ದುರಂತ ನಡೆದ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಸೋಮವಾರವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಅಪಘಾತಕ್ಕೀಡಾದ ಇಂದೋರ್-ಪಾಟ್ನಾ ಎಕ್ಸ್ ಪ್ರೆಸ್ ರೈಲು ಸಂಖ್ಯೆ 19321ರ ಹಳಿತಪ್ಪಿದ 14 ಬೋಗಿಗಳಲ್ಲಿ  ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈವರೆಗೂ 142 ಶವಗಳು ಪತ್ತೆಯಾಗಿದ್ದು, ಈ ಪೈಕಿ 110 ಶವಗಳ ಗುರುತು ಪತ್ತೆ ಮಾಡಲಾಗಿದೆ. ಅಂತೆಯೇ ಅಪಘಾತದಲ್ಲಿ ಗಾಯಾಳುಗಳಾಗಿರುವ 169 ಮಂದಿ ಪ್ರಯಾಣಿಕರ  ಪಟ್ಟಿಯನ್ನು ಕೂಡ ರೈಲ್ವೇ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಇನ್ನುಳಿದವರ ಗುರುತುಪತ್ತೆ ಇನ್ನಷ್ಟೇ ನಡೆಯಬೇಕಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸೋಮವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕಾನ್ಪುರ ಐಜಿ ಝಕಿ ಅಹ್ಮದ್ ಅವರು, 142 ಶವಗಳನ್ನು ಹೊರತೆಗೆಯಲಾಗಿದ್ದು, ಈ ಪೈಕಿ 110 ಮಂದಿಯ ಗುರುತು ಪತ್ತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅಂತೆಯೇ  ರೈಲ್ವೇ ಇಲಾಖೆ ಗಾಯಾಳುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಟ್ಟಿಯನ್ನು ತನ್ನ ವೆಬ್ ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದೆ.

No Comments

Leave A Comment