Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ನೋಟ್ ನಿಷೇಧ ಅಂತ್ಯವಲ್ಲ, ಕಪ್ಪು ಹಣದ ವಿರುದ್ಧ ಹೋರಾಟ ಈಗ ಆರಂಭವಾಗಿದೆ: ಮೋದಿ

modi-pm22ನವದೆಹಲಿ: ನೋಟ್ ನಿಷೇಧ ಅಂತ್ಯವಲ್ಲ. ಕಪ್ಪು ಹಣ ಮತ್ತು ಭ್ರಷ್ಟಾಚಾರದ ವಿರುದ್ಧದ ನಿಜವಾದ ಹೋರಾಟ ಈಗ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕಪ್ಪು ಕುಳಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇಂದು ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕಪ್ಪು ಹಣದ ವಿರುದ್ಧ 500 ಹಾಗೂ 1000 ರುಪಾಯಿ ನೋಟ್ ನಿಷೇಧ ಕಡೆ ಅಸ್ತ್ರವಲ್ಲ. ಆರಂಭವಷ್ಟೆ. ಕಪ್ಪು ಹಣ, ನಕಲಿ ನೋಟ್ ಹಾಗೂ ಭ್ರಷ್ಟಾಚಾರದಿಂದಾಗಿ ಬಡವರು, ಕೆಳ ಮತ್ತು ಮಧ್ಯಮ ವರ್ಗದ ಜನ ನೋವು ಅನುಭವಿಸುತ್ತಿದ್ದಾರೆ ಎಂದರು.

ಇದೇ ವೇಳೆ ನೋಟ್ ನಿಷೇಧವನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, ಕೆಲವರು ಕಪ್ಪು ಹಣದ ಪರ ಬಹಿರಂಗವಾಗಿ ಬೆಂಬಲಕ್ಕೆ ನಿಂತಿದ್ದಾರೆ ಎಂದರು.

500 ಹಾಗೂ 1000 ರುಪಾಯಿ ನೋಟ್ ನಿಷೇಧಿಸುವ ಮೂಲಕ ಕಪ್ಪು ಹಣ, ಭ್ರಷ್ಟಾಚಾರ ಹಾಗೂ ನಕಲಿ ನೋಟ್ ವಿರುದ್ಧ ಸಮರ ಸಾರಿದ ಪ್ರಧಾನಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ಸಂಸದೀಯ ಸಭೆಯಲ್ಲಿ ಅವಿರೋಧ ನಿರ್ಣಯ ಕೈಗೊಳ್ಳಲಾಯಿತು.

No Comments

Leave A Comment