Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಬಾಹುಬಲಿ-2 ಚಿತ್ರದ ಕ್ಲೈಮ್ಯಾಕ್ಸ್ ಲೀಕ್: ಗ್ರಾಫಿಕ್ ಡಿಸೈನರ್ ಕೃಷ್ಣ ಬಂಧನ

bahubali-22ಹೈದರಾಬಾದ್: ಬಹು ನಿರೀಕ್ಷಿತ ಬಾಹುಬಲಿ-2 ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಾವಳಿಯನ್ನು ಸೋರಿಕೆ ಮಾಡಿದೆ ಆರೋಪದ ಮೇಲೆ ಚಿತ್ರದ ಗ್ರಾಫಿಕ್ ಡಿಸೈನರ್ ಕೃಷ್ಣ ಅವರನ್ನು ಹೈದರಾಬಾದ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಎಸ್ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ-2 ಚಿತ್ರದ 9 ನಿಮಿಷದ ಕ್ಲೈಮ್ಯಾಕ್ಸ್ ದೃಶ್ಯಾವಳಿಯನ್ನು ಲೀಕ್ ಮಾಡಲಾಗಿದೆ ಎಂದು ಆರೋಪಿಸಿ ಚಿತ್ರದ ನಿರ್ಮಾಪಕರು ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಜುಬಲಿ ಹಿಲ್ಸ್ ಪೊಲೀಸ್ ಠಾಣೆಯ ಪೊಲೀಸರು, ಅನ್ನಪೂರ್ಣ ಫಿಲ್ಮ್ ಸ್ಟುಡಿಯೋದಲ್ಲಿ ಗ್ರಾಫಿಕ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ ಕೃಷ್ಣನನ್ನು ಬಂಧಿಸಿದ್ದಾರೆ.

ಮುಂದಿನ ವರ್ಷ ಬಿಡುಗಡೆಗೆ ಸಿದ್ಧವಾಗಿದ್ದ ಬಾಹುಬಲಿ-2 ಚಿತ್ರದ ಕ್ಲೈಮ್ಯಾಕ್ಸ್ ವಿಡಿಯೋ ಕೆಲವು ದಿನಗಳ ಹಿಂದಷ್ಟೇ ಲೀಕ್ ಮಾಡಲಾಗಿದ್ದು, ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು.

No Comments

Leave A Comment