Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

25ರಿಂದ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟ 1500 ಕ್ರೀಡಾಪಟುಗಳು ಭಾಗಿ: ಅಮೃತ್‌ ಶೆಣೈ

imagesಉಡುಪಿ: ‘ರಾಜ್ಯಮಟ್ಟದ ಕರಾಟೆ ಸ್ಪರ್ಧೆ–2016’ ಇದೇ 25ರಿಂದ 27ರ ವರೆಗೆ ಉಡುಪಿಯ ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಕ್ರೀಡಾಕೂಟ ಸಂಘಟನಾ ಸಮಿತಿಯ ಕಾರ್ಯಾಧ್ಯಕ್ಷ ಅಮೃತ್‌ ಶೆಣೈ ಹೇಳಿದರು.

ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಸಹಯೋಗ ದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸ ಲಾಗಿದೆ. 34 ಶೈಕ್ಷಣಿಕ ಜಿಲ್ಲೆಗಳಿಂದ ಸುಮಾರು 1500 ಕ್ರೀಡಾಪಟುಗಳು ಭಾಗವಹಿಸುವರು. 25ರಂದು ಸಂಜೆ 4ಗಂಟೆಗೆ ನಗರದ ಜೋಡುಕಟ್ಟೆಯಿಂದ ಶಾಲೆಯವರೆಗೆ ಪುರ ಮೆರವಣಿಗೆ ನಡೆಯಲಿದೆ. ಅಂದು ಸಂಜೆ 5ಗಂಟೆಗೆ ಮೀನುಗಾರಿಕೆ ಮತ್ತು ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಸ್ಪರ್ಧಾಕೂಟಕ್ಕೆ ಚಾಲನೆ ನೀಡುವರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಶೇಟ್‌ ಉಪಸ್ಥಿತರಿರುವರು ಎಂದು ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಸಂಸದರಾದ ಶೋಭಾ ಕರಂದ್ಲಾಜೆ, ಆಸ್ಕರ್‌ ಫರ್ನಾಂಡಿಸ್‌, ಶಾಸಕರಾದ ವಿ. ಸುನೀಲ್‌ ಕುಮಾರ್‌, ವಿನಯಕುಮಾರ್‌ ಸೊರಕೆ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ. ಗೋಪಾಲ ಪೂಜಾರಿ, ವಿಧಾನ ಪರಿಷತ್‌ ಸದಸ್ಯರಾದ ಕ್ಯಾ. ಗಣೇಶ್‌ ಕಾರ್ಣಿಕ್‌, ಕೋಟ ಶ್ರೀನಿವಾಸ ಪೂಜಾರಿ, ಕೆ. ಪ್ರತಾಪ್‌ಚಂದ್ರ ಶೆಟ್ಟಿ ಅತಿಥಿಗಳಾಗಿ ಬರುವರು. 27ರಂದು ಬೆಳಿಗ್ಗೆ 11.30ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧ ವ ಬನ್ನಂಜೆ ವಹಿಸುವರು ಎಂದರು.

ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಬಿ. ನಿರ್ಮಲ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್‌. ಮಧುಕರ್‌, ಉಪಾ ಧ್ಯಕ್ಷ ನಾಗಭೂಷಣ್‌ ಶೇಟ್‌ ಇದ್ದರು.

No Comments

Leave A Comment